ಶಿವಮೊಗ್ಗ : ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ನಗರ ಬಿಜೆಪಿ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳ ಮೂಲಕ ಪಶ್ಚಿಮ ಬಂಗಾಳದ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಬೆಂಬಲಿಗರು ಅಲ್ಲಿನ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಕೃತ್ಯಗಳನ್ನು ನಡೆಸುತ್ತಿದ್ದಾರೆ. ಸಾರ್ವಜನಿಕರ ಆಸ್ತಿಗಳನ್ನು ಹಾನಿ ಮಾಡುತ್ತಿದ್ದಾರೆ. ಇದನ್ನು ನಗರ ಬಿಜೆಪಿ ಖಂಡಿಸುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಗೂಂಡಾವರ್ತನೆ ನಡೆಸುತ್ತಿರುವ ಮಮತಾ ಬ್ಯಾನರ್ಜಿಯವರ ಬೆಂಬಲಿಗರನ್ನು ಕೂಡಲೇ ಬಂಧಿಸಬೇಕು. ಅವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು. ಅಲ್ಲಿನ ರಾಜ್ಯಪಾಲರು ಗೂಂಡಾ ಪ್ರವೃತ್ತಿ ನಿಲ್ಲಿಸುವಂತೆ ಪಶ್ಚಿಮಬಂಗಾಳ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು. ಹಲ್ಲೆಗೊಳಗಾದವರ ಕುಟುಂಬಗಳಿಗೆ ಭದ್ರತೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಮೇಯರ್ ಸುನಿತಾ ಅಣ್ಣಪ್ಪ, ಮಾಜಿ ಉಪಮೇಯರ್ ಸುರೇಖಾ ಮುರುಳೀಧರ್, ನಗರ ಬಿಜೆಪಿ ಅಧ್ಯಕ್ಷ ಎನ್.ಕೆ.ಜಗದೀಶ್, ಪ್ರಧಾನ ಕಾರ್ಯದರ್ಶಿಗಳಾದ ಡಿ.ಮೋಹನರೆಡ್ಡಿ, ಎಸ್.ಎನ್.ಚನ್ನಬಸಪ್ಪ, ಈ.ವಿಶ್ವಾಸ್,ಧೀರರಾಜ್ ಹೊನ್ನವಿಲೆ, ನಾಗರಾಜ್, ಪಾಲಿಕೆ ಸದಸ್ಯರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ
RELATED ARTICLES