Tuesday, November 5, 2024
Google search engine
Homeಇ-ಪತ್ರಿಕೆರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕನಸ್ಸು ನನಸಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಣ ಮಾಡಲು ಒಪ್ಪಿಗೆ ನೀಡಿದೆ.

ಸಭೆ ನಂತರ ಮಾತನಾಡಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್‌ ಅವರು, ಬ್ರ್ಯಾಂಡ್ ಬೆಂಗಳೂರು ಮಾಡುವ ನಿಟ್ಟಿನಲ್ಲಿ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು,  ಹೆಸರು ಮಾತ್ರ ಬದಲಾವಣೆ ಆದ್ರೂ ಜಿಲ್ಲಾ ಕಾರ್ಯಗಳು ಮೊದಲಿನಂತೆಯೇ ನಿರ್ವಹಣೆ ಎಂದು ಹೇಳಿದ್ದಾರೆ.

ಬೆಂಗಳೂರು ಜಿಲ್ಲಾ ವ್ಯಾಪ್ತಿಗೆ ಒಳಪಡುವ ಎಲ್ಲ ಸಚಿವರು, ಶಾಸಕರು ಸೇರಿಕೊಂಡು ಕಳೆದ ಜು.9ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಮನವಿ ಪತ್ರ ಸಲ್ಲಿಕೆ ಮಾಡಿದ್ದರು. ಈ ವೇಳೆ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಹಾಗೆಯೇ ಉಳಿಸಿಕೊಳ್ಳುವಂತೆಯೂ ಮನವಿ ಮಾಡಿದ್ದರು. 

ಈ ಮೊದಲು ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲ್ಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು.

RELATED ARTICLES
- Advertisment -
Google search engine

Most Popular

Recent Comments