Wednesday, November 13, 2024
Google search engine
Homeಇ-ಪತ್ರಿಕೆಶಿವಮೊಗ್ಗ: ಶಾಲೆ ತೊರೆದವರು ಇಲ್ಲಿ ಬದುಕು ಕಟ್ಟಿಕೊಳ್ಳಿ: ನಾಳೆ ಉನ್ನತ ಮಟ್ಟದ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ...

ಶಿವಮೊಗ್ಗ: ಶಾಲೆ ತೊರೆದವರು ಇಲ್ಲಿ ಬದುಕು ಕಟ್ಟಿಕೊಳ್ಳಿ: ನಾಳೆ ಉನ್ನತ ಮಟ್ಟದ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಉದ್ಘಾಟನೆ 

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ವಜ್ರ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷ ಉನ್ನತ ಮಟ್ಟದ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರವನ್ನು ಸಂಘದ ಕಟ್ಟಡದಲ್ಲಿ ಪ್ರಾರಂಭಿಸಲು ಯೋಜಿಸಿದೆ. ಶಾಲೆ ತೊರೆದವರಿಗೆ ಇಲ್ಲಿ ಬದುಕು ಕಟ್ಟಿಕೊಳ್ಳುವ ಒಂದು ಸುವರ್ಣಾವಕಾಶವಾಗಿದೆ.  ನಾಳೆ (ಭಾನುವಾರ) 10:30ಕ್ಕೆ ಇದರ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.

ಇಂದು ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು  ಉದ್ಘಾಟಿಸಲಿರುವರು. ಮುಖ್ಯ ಅತಿಥಿಯಾಗಿ ಸಂಸದ ಬಿ.ವೈ ರಾಘವೇಂದ್ರ ಅವರು ಆಗಮಿಸಲಿದ್ದಾರೆ. ಗೌರವಾನ್ವಿತ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ವಿಧಾನಪರಿಷತ್ ಸದಸ್ಯರಾದ ಡಿ.ಎಸ್. ಅರುಣ್ ಮತ್ತು ಡಾ. ಧನಂಜಯ ಸರ್ಜಿ ಅವರು ಆಗಮಿಸಲಿರುವರು ಹಾಗೂ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಒಂದು ವರ್ಷದ ಪ್ರಯತ್ನದ ಫಲವಾಗಿ ಜಿಲ್ಲೆಯ ವಿದ್ಯಾವಂತ ನಿದುದ್ಯೋಗಿಗಳಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡುವ ಮತ್ತು  ಜಿಲ್ಲೆಯ ಕೈಗಾರಿಕೋಧ್ಯಮಿಗಳಿಗೆ ಮತ್ತು ವಾಣಿಜ್ಯೋಧ್ಯಮಿಗಳಿಗೆ ಪೂರಕವಾದ ಕೌಶಲ್ಯಯುಕ್ತ ಉದ್ಯೋಗಿಗಳನ್ನು ಒದಗಿಸುವ ನೆಲೆಯಲ್ಲಿ ಈ ಕೇಂದ್ರದ ಪ್ರಾರಂಭೋತ್ಸವವನ್ನು ನೆರವೇರಿಸಲಾಗುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳು ಬರುವುದರೊಂದಿಗೆ ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುವ ನಿಟ್ಟಿನಲ್ಲಿ ಈ ಅಕಾಡೆಮಿ ಕಾರ್ಯನಿರ್ವಹಿಸುವ ಉದ್ದೇಶವನ್ನು ಹೊಂದಿದೆ ಎಂದು ಮಾಹಿತಿ ನೀಡಿದರು.

ತರಬೇತಿ ಕೇಂದ್ರದ ಮುಖ್ಯ ಉದ್ದೇಶ ಪ್ರಚಲಿತ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯದ ಕೊರತೆ ಎದ್ದು ಕಾಣುತ್ತದೆ. ನಗರದಲ್ಲಿ ಉನ್ನತ ಮಟ್ಟದ ಕೌಶಲ್ಯ ತರಬೇತಿ ಕೇಂದ್ರದ ಅವಶ್ಯಕತೆಯನ್ನು ಮನಗಂಡು, ಜಿಲ್ಲೆಯ ಯುವ ವಿದ್ಯಾವಂತ ವಿದ್ಯಾರ್ಥಿಗಳಿಗೆ ಕೌಶಲ್ಯಯುತ ತರಬೇತಿ ಕೊಟ್ಟು 2-3 ವರ್ಷಗಳಲ್ಲಿ ಉದ್ಯೋಗದ ಭರವಸೆ ನೀಡುವಂತದ್ದಾಗಿದೆ ಹಾಗೂ ಕೌಶಲ್ಯ ಯುಕ್ತ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ದೊರೆತಾಗ ನಗರಕ್ಕೆ ಹೊಸ ಹೊಸ ಸ್ಟಾರ್ಟ ಆಪ್ ಕಂಪೆನಿಗಳು  ಬರಲು ಅವಕಾಶವಾಗುತ್ತದೆ. ಈ ಮೂಲಕ ವಾಣಿಜ್ಯ ಮತ್ತು ಕೈಗಾರಿಕಾ  ಕ್ಷೇತ್ರ ಬೆಳೆಯಲು ಸಾದ್ಯವಾಗುತ್ತದೆ ಹಾಗೂ ಬೇಕಾದ ಕೆಲಸಕ್ಕೆ ಬೇಕಾದಂತಹ ಕೆಲಸಗಾರರು ಸಿಗುವಂತಹ ಕೆಲಸಗಾರರ ಸಮೂಹವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಜೊತೆಗೆ ಜಿಲ್ಲೆಯಲ್ಲಿರುವ ಪ್ರತಿಭಾವಂತ ಕೆಲಸಗಾರರನ್ನು ನಗರದಲ್ಲಿ ಉಳಿಸಿಕೊಳ್ಳುವಂತಹ ಸನ್ನಿವೇಶ ಸೃಷ್ಟಿಯಾಗಬೇಕು ಕೌಶಲ್ಯ ತರಬೇತಿಗಾಗಿ ಹಲವು ಕಂಪೆನಿಗಳೊಂದಿಗೆ ಮತ್ತು ನಗರದ ಅನೇಕ ವಿದ್ಯಾಸಂಸ್ಥೆಗಳೊಂದಿಗೆ ಪರಸ್ಪರ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದರು.

ವಿದ್ಯಾಭ್ಯಾಸವನ್ನು ತೊರೆದ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಿ ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಸಹಾಯ ಮಾಡಲು ಸಾದ್ಯವಾಗುವುದಲ್ಲದೆ ಇದರಿಂದ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳು ಬರುವುದರೊಂದಿಗೆ ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುವ ನಿಟ್ಟಿನಲ್ಲಿ ಈ ಅಕಾಡೆಮಿ ಕಾರ್ಯನಿರ್ವಹಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಸಹಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಖಜಾಂಚಿ ಎಂ.ರಾಜು, ನಿರ್ದೇಶಕರಾದ ಪ್ರದೀಪ್ ವಿ.ಯೆಲಿ,ಇ.ಪರಮೇಶ್ವರ,  ಮರಿಸ್ವಾಮಿ, ಎಂ.ಆರ್. ರಮೇಶ್ ಹೆಗಡೆ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments