ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ 3ನೇ ಪೂರಕ ಪರೀಕ್ಷೆಯ ಫಲಿತಾಂಶವು ಇಂದು (ಮಂಗಳವಾರ) ಪ್ರಕಟಗೊಂಡಿದ್ದು, ಶೇ.23.73ರಷ್ಟು ಫಲಿತಾಂಶ ಬಂದಿದೆ ಎಂದು ಮಂಡಲಿ ಅಧ್ಯಕ್ಷೆಯಾಗಿರುವ ಐಎಎಸ್ ಅಧಿಕಾರಿ ಎನ್.ಮಂಜುಶ್ರೀ ತಿಳಿಸಿದ್ದಾರೆ.
ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 75466 ವಿದ್ಯಾರ್ಥಿಗಳ ಪೈಕಿ 17,911 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.21.65 ಬಾಲಕರು ಪಾಸ್ ಆಗಿದ್ದರೆ, ಶೇ. 26.55 ಬಾಲಕಿಯರು ಉತೀರ್ಣರಾಗಿದ್ದಾರೆ. ಈ ಮೂಲಕ ಮತ್ತೊಮ್ಮೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.
ಕಲಾ ವಿಭಾಗದ ಫಲಿತಾಂಶ ಪ್ರಮಾಣ ಶೇ. 21.71
ವಾಣಿಜ್ಯ ವಿಭಾಗದ ಫಲಿತಾಂಶ ಪ್ರಮಾಣ ಶೇ. 23.58
ವಿಜ್ಞಾನ ವಿಭಾಗದ ಫಲಿತಾಂಶ ಪ್ರಮಾಣ ಶೇ. 27.73