ಶಿವಮೊಗ್ಗ: ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ ನಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಪಡೆದು ದಾಳಿ ನಡೆಸಿ, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಶಿವಮೊಗ್ಗ ಟೌನ್ ಪುರುದಾಳು ರಸ್ತೆಯಲ್ಲಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದರು.
ಪೊಲೀಸ್ ಅಧೀಕ್ಷಕರಾದ ಮಿಥುನ್ ಕುಮಾರ್ ಜಿ.ಕೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮಾರೆಡ್ಡಿ, ಕಾರಿಯಪ್ಪ ಎ.ಜಿ.ಯವರ ಮಾರ್ಗದರ್ಶನದಲ್ಲಿ ಈ ದಾಳಿಯನ್ನು ನಡೆಸಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯ ಪಿಐಯಾದ ಮಂಜುನಾಥ್ ಬಿ, ಮತ್ತು ಪಿಎಸ್ಐಯಾದ ಶಿವಪ್ರಸಾದ್ ರವರ ನೇತೃತ್ವದ ಸಿಬ್ಬಂದಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದೆ.
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳಾದ ವಿನೋಬನಗರದ ಮಾಲತೇಶ ಜೆ(32), ಮತ್ತು ಶರಾವತಿ ನಗರದ ರಮೇಶ .ವಿ. (25), ಇವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿತಗಳಿಂದ ಅಂದಾಜು ಮೌಲ್ಯ 14,000 ರೂ.ಗಳ 260 ಗ್ರಾಂ ತೂಕದ ಒಣ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ.