ಬೆಂಗಳೂರು: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ. ಶುಕ್ರವಾರ (ಜು.26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೊಯಲ್ ಅವರ ಪತ್ನಿಯವರನ್ನ ನೇಮಕ ಮಾಡುವ ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.
ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಕೆ ಪಾಟೀಲ್, ಹಾಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ 5 ದಿನದಲ್ಲಿ ನಿವೃತ್ತಿ ಆಗುತ್ತಾರೆ. ಹೀಗಾಗಿ ನೂತನ ಸಿಎಸ್ ಆಗಿ ಶಾಲಿನಿ ರಜನೀಶ್ರನ್ನು ನೇಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಅಧಿಕೃತ ಮಾಹಿತಿ ನೀಡಿದರು. ಇದರೊಂದಿಗೆ ಪತಿ ನಿವೃತ್ತಿ ಬೆನ್ನಲ್ಲೇ ಅದೇ ಹುದ್ದೆ ಪತ್ನಿಗೆ ದಕ್ಕಿದೆ.
ಇದೇ ತಿಂಗಳ ಜುಲೈ 31ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ನಿವೃತ್ತಿ ಹೊಂದಲಿದ್ದಾರೆ. ನಂತರ ತೆರವಾಗುವ ಸ್ಥಾನಕ್ಕೆ ರಜನೀಶ್ ಗೋಯಲ್ ಅವರ ಪತ್ನಿಯೂ ಆಗಿರುವ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರನ್ನ ನೇಮಕ ಮಾಡಲಾಗಿದೆ.
ಆಗಸ್ಟ್ 1 ರಿಂದ ಶಾಲಿನಿ ರಜನೀಶ್ ಅವರು ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ..