Thursday, December 12, 2024
Google search engine
Homeಇ-ಪತ್ರಿಕೆಶಿವಮೊಗ್ಗ: ಕೇಂದ್ರ ಬಜೆಟ್‌ ವಿರೋಧಿಸಿ ಕಾಂಗ್ರೆಸ್‌ ನಿಂದ ಖಾಲಿ ಚೊಂಬು ಪ್ರದರ್ಶಿಸಿ, ಪ್ರತಿಭಟನೆ

ಶಿವಮೊಗ್ಗ: ಕೇಂದ್ರ ಬಜೆಟ್‌ ವಿರೋಧಿಸಿ ಕಾಂಗ್ರೆಸ್‌ ನಿಂದ ಖಾಲಿ ಚೊಂಬು ಪ್ರದರ್ಶಿಸಿ, ಪ್ರತಿಭಟನೆ

ಶಿವಮೊಗ್ಗ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಬಹುದೊಡ್ಡ ಅನ್ಯಾಯ ಎಸಗಲಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಇಂದು ಪ್ರತಿಭಟನ ಮೆರವಣಿಗೆ ನಡೆಸಿ ನಗರದ ಮಹಾವೀರ ವೃತ್ತದಲ್ಲಿ ಖಾಲಿ ಚೊಂಬು ಪ್ರದರ್ಶನ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸಲಾಗಿದೆ. ಯಾವುದೇ ನೂತನ ಕೇಂದ್ರಿಯ ಯೋಜನೆಗಳಾಗಲಿ, ನೀರಾವರಿ ಯೋಜನೆಯಾಗಲಿ ಅಥವಾ ಹೊಸ ಅನುದಾನವಾಗಲಿ ರಸ್ತೆಅಭಿವೃದ್ಧಿಯಾಗಲಿ, ಅತಿವೃಷ್ಠಿ, ಅನಾವೃಷ್ಠಿ ಗಳಿಗೆ ಸ್ಪಂದನೆಯಾಗಲಿ ಇಲ್ಲ ಎಂದು ಪ್ರತಿಭಟನಕಾರರು ತಿಳಿಸಿದರು.

ರಾಜ್ಯದಿಂದ ಬಿಜೆಪಿ ಜೆಡಿಎಸ್‌ನ 19 ಸಂಸದರು ಆಯ್ಕೆಯಾಗಿದ್ದಾರೆ. ಅವರು ಯಾರು ರಾಜ್ಯದ ಪರವಾಗಿ ಮಾತನಾಡಲೇ ಇಲ್ಲ. ಬಾಯಿಗೆ ಬೀಗ ಹಾಕಿಕೊಂಡು ಸುಮ್ಮನಿದ್ದಾರೆ. ಇವರ ಜೊತೆಗೆ 5 ಜನ ಕೇಂದ್ರ ಮಂತ್ರಿಗಳು ಇದ್ದಾರೆ. ಅವರು ಕೂಡ ಏನೂ ಕೆಲಸ ಮಾಡಿಲ್ಲ. ಬಹುದೊಡ್ಡ ಅನ್ಯಾಯ ರಾಜ್ಯಕ್ಕೆ ಆಗಿದೆ ಎಂದು ದೂರಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಕಳೆದ ಬಜೆಟ್‌ನಲ್ಲಿಯೇ 53೦೦ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿತ್ತು. ಆದರೆ, ಈ ಬಾರಿ ಹಣವನ್ನು ಕೊಟ್ಟಿಲ್ಲ ಮತ್ತು ಬಜೆಟ್‌ನಲ್ಲಿಯೂ ಈ ವಿಷಯವನ್ನು ಪ್ರಸ್ತಾಪವನ್ನೇ ಮಾಡಿಲ್ಲ. ಇದು ಈ ಜಿಲ್ಲೆಗೆ ಮಾಡಿದ ಬಹುದೊಡ್ಡ ಅನ್ಯಾಯವಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಅವರು, ಜಿಲ್ಲೆಯ ಸಮಸ್ಯೆಗಳನ್ನು ಕೇಂದ್ರ ಸರ್ಕಾರ ಬಗೆಹರಿಸಲಿದೆ. ಬಹುದೊಡ್ಡ ಮೊತ್ತವನ್ನು ಕೇಂದ್ರದಿಂದ ಬಜೆಟ್‌ನಲ್ಲಿ ತರುತ್ತೇವೆ ಎಂದು ಹೇಳಿದ್ದರು. ಆದರೆ ಕೇಂದ್ರ ಸರ್ಕಾರ ಕೊಟ್ಟಿರುವುದು ಖಾಲಿ ಚೆಂಬು ಅಷ್ಟೇ ಎಂದು ಪ್ರತಿಭಟನಕಾರರು ತಿಳಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಪ್ರಮುಖರಾದ ಆಯನೂರು ಮಂಜುನಾಥ್,ಎನ್.ರಮೇಶ್,ಹೆಚ್.ಎಸ್.ಸುಂದರೇಶ್, ಆರ್.ಎಂ.ಮಂಜುನಾಥಗೌಡ, ಎಸ್.ಕೆ.ಮರಿಯಪ್ಪ, ಹೆಚ್.ಸಿ.ಯೋಗೀಶ್, ಎಸ್.ಪಿ.ಶೇಷಾದ್ರಿ, ರೇಖಾ ರಂಗನಾಥ್, ಶರತ್‌ಮರಿಯಪ್ಪ, ಗಿರೀಶ್, ಜಿ.ಡಿ.ಮಂಜುನಾಥ್, ನೇತ್ರಾವತಿ, ರಮೇಶ್ ಹೆಗಡೆ, ರಂಗನಾಥ್ ಕೆ., ವಿಜಯ್‌ಕುಮಾರ್ ಮುಂತಾದವರು ಇದ್ದರು.

RELATED ARTICLES
- Advertisment -
Google search engine

Most Popular

Recent Comments