ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳ್ಳಾರಿಯ ಸಂಡೂರ ತಾಲೂಕಿನ ತೋರಣಗಲ್ ಬಳಿಯ ಜಿಂದಾಲ್ ವಿದ್ಯಾನಗರದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಯೋಗ ಪ್ರದರ್ಶನ ಮಾಡಿದರು.
ವಚನಾನಂದ ಶ್ರೀಗಳ ನೇತೃತ್ವದಲ್ಲಿ ಯೋಗ ಕಾರ್ಯಕ್ರಮ ಆರಂಭವಾಯಿತು.
ಮುಖ್ಯಮಂತ್ರಿಗಳು ಸಾವಿರಾರು ಯೋಗ ಪಟುಗಳೊಂದಿಗೆ ಯೋಗ ಪ್ರದರ್ಶನ ನೀಡಿದರು. ನಟಿ ಶ್ರೀಲೀಲಾ, ಸಚಿವ ಸಂತೋಷ ಲಾಡ್, ಸಂಸದ ಈ. ತುಕಾರಾಂ ಜಿಲ್ಲೆಯ ಶಾಸಕರು ಹಾಗೂ ಮುಖಂಡರು ಸಿಎಂಗೆ ಸಾಥ್ ನೀಡಿದರು