Thursday, December 5, 2024
Google search engine
Homeಇ-ಪತ್ರಿಕೆಕಾರ್ಮಿಕರ ಸಮಸ್ಯೆ ಬಗೆಹರಿಸಿ: ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಆಗ್ರಹ

ಕಾರ್ಮಿಕರ ಸಮಸ್ಯೆ ಬಗೆಹರಿಸಿ: ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಆಗ್ರಹ

ಶಿವಮೊಗ್ಗ : . ಜಿಲ್ಲೆಯಲ್ಲಿ ಖಾಲಿ ಇರುವ ಕಾರ್ಮಿಕ ನಿರೀಕ್ಷಕರುಗಳ ನೇಮಕಾತಿ ನಡೆಸಬೇಕು,ಕಾರ್ಮಿಕರ ಮಕ್ಕಳಿಗೆ ನೀಡುತ್ತಿರುವ ಸ್ಕಾಲರ್‌ಶಿಪ್‌ನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂಬ ಬೇಡಿಕೆಗಳು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟವು ನಗರದಲ್ಲಿ ಪ್ರತಿಭಟನೆ ನಡೆಸಿತು.

ವಿನೋಬನಗರದ ಪೊಲೀಸ್ ಚೌಕಿಯಿಂದ ಸೂಡಾ ಸಂಕೀರ್ಣದಲ್ಲಿರುವ ಕಾರ್ಮಿಕ ಕಚೇರಿವರೆಗೂ ಜಮಾಯಿಸಿದ್ದ ನೂರಾರು ಸಂಖ್ಯೆಯ ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಅತಿ ಬಡ ಕಾರ್ಮಿಕರಿಗೆ ಗುರುತಿಸಿ ನಿವೇಶನ ನೀಡಬೇಕು. ಕಳೆದ ಒಂದು ವರ್ಷದಲ್ಲಿ ಕಾಮಿಕ ಕಲ್ಯಾಣ ಮಂಡಳಿಯಿಂದ ಕಾರ್ಮಿಕರಿಗಾಗಿ ನೀಡುತ್ತಿರುವ ಲ್ಯಾಪ್‌ಟ್ಯಾಪ್ ಖರೀದಿ,ಮಹಿಳೆಯರಿಗಾಗಿ ಪ್ಯಾಡ್ ಖರೀದಿ, ಆಸ್ಪತ್ರೆಗಳ ಮೂಲಕ ವೈದ್ಯಕೀಯ ತಪಾಸಣೆ, ಮತ್ತು ಇತ್ತೀಚೆಗೆ ಆರ್ಯುವೇದ ಕಂಪನಿಯಿಂದ ನೀಡಿದ ಪೌಷ್ಟಿಕಾಂಶ್ ಕಿಟ್ ಖರೀದಿಯಲ್ಲಿ ಬಾರಿ ಅವ್ಯವಹಾರ ಮಾಡಲಾಗಿದ್ದು, ವಾಸ್ತವ ದರಕ್ಕಿಂತ ಹೆಚ್ಚಿನ ದರದಲ್ಲಿ ಖರೀದಿಸಿದ್ದು, ನೂರಾರು ಕೋಟಿ ಅವ್ಯವಹಾರ ಇಲಾಖೆ ಮಾಡಿದೆ. ಈಗ ಸ್ಕೂಲ್ ಕಿಟ್ ಬರಲು ಸಿದ್ದವಾಗಿದ್ದು, ಇದರ ಬಗ್ಗೆಯೂ ತನಿಖೆಯಾಗಬೇಕು. ಜಿಲ್ಲೆಯಲ್ಲಿ ಖಾಲಿ ಇರುವ ಕಾರ್ಮಿಕ ನಿರೀಕ್ಷಕರುಗಳ ನೇಮಕಾತಿಯನ್ನು ಕೂಡಲೇ ಮಾಡಬೇಕು. ಈ ಕೂಡಲೇ ಕಾರ್ಮಿಕರ ಮಕ್ಕಳಿಗೆ ನೀಡುತ್ತಿರುವ ಸ್ಕಾಲರ್‌ಶಿಪ್‌ನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ, ಕಾರ್ಮಿಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಶೈಕ್ಷಣಿಕ ಸಹಾಯಧನ ಅರ್ಜಿ ಸಲ್ಲಿಕೆ ಅವಧಿಯನ್ನು ಆ.೩೧ರವರೆಗೆ ವಿಸ್ತರಿಸಬೇಕು. ೨೦೨೩ರ ಶೈಕ್ಷಣಿಕ ಸಹಾಯಧನ ಅಧಿಸೂಚನೆ ರದ್ದುಪಡಿಸಿ ೨೦-೨೧ರ ಅಧಿಸೂಚನೆ ಅನ್ವಯವೇ ಶೈಕ್ಷಣಿಕ ಸಹಾಯಧನ ನೀಡಬೇಕು. ನೊಂದಣಿ ಮತ್ತು ಮರುನೊಂದಣಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಸಕಾರಣವಿಲ್ಲದೆ ತಿರಸ್ಕರಿಸಬಾರದು. ಕಾಲಮಿತಿಯಲ್ಲಿ ಅರ್ಜಿ ವಿಲೇವಾರಿ ಮಾಡಬೇಕು. ನೈಜ ಕಾರ್ಮಿಕರ ಅರ್ಜಿಗಳನ್ನು ಮಾನ್ಯ ಮಾಡಬೇಕು. ಲೈಸೆನ್ಸ್ ಸಲ್ಲಿಸದಿರುವ ಕಾರಣವನ್ನು ಮುಂದುಮಾಡಿ ಕೆಲವು ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದ್ದು, ಅದನ್ನು ನಿಲ್ಲಿಸಬೇಕು. ಪಿಂಚಣಿ ಅರ್ಜಿಗಳು ವಿಲೇವಾರಿಯಾಗಿಲ್ಲ. ಪಿಂಚಣಿಯನ್ನು ವರ್ಷದ 12 ತಿಂಗಳು ಸರಿಯಾಗಿ ಪಾವತಿ ಮಾಡುತ್ತಿಲ್ಲ. ಕಾರ್ಮಿಕರು ಮಂಡಳಿಯ ಫಲಾನುಭವಿಗಳಾಗಿ ನೊಂದಾಣಿಯಾಗುವ ಸಮಯದಲ್ಲಿ ಸಲ್ಲಿಸಿರುವ ವಯಸ್ಸಿನ ದಾಖಲೆಯನ್ನೇ ಪಿಂಚಣಿ ಸೌಲಭ್ಯಕ್ಕೆ ದಾಖಲೆಯಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಬೇಡಿಕೆ ಈಡೇರದಿದ್ದಲ್ಲಿ. ಇಡೀ ರಾಜ್ಯದಲ್ಲಿ ಕಾರ್ಮಿಕ ಕಚೇರಿ ಹಾಗೂ ಎಲ್ಲಾ ಜನಪ್ರತಿನಿಧಿಗಳ ಮನೆಯ ಮುಂದೆ ಅನಿರ್ಧಿಷ್ಟವಧಿ ಹೋರಾಟ ಮಾಡುವುದಾಗಿ ಒಕ್ಕೂಟ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜೆ. ಸಂಜಯ್‌ಕುಮಾರ್, ಪ್ರಮುಖರಾದ ಜಿ.ಕೆ.ಸುಂದರ್, ಆರ್‍ಮುಗಂ, ಕೆ.ಗೋಪಿ, ಪ್ರಕಾಶ್ ಹುಣಸವಳ್ಳಿ, ಸೇರಿದಂತೆ ನೂರಾರು ಕಾರ್ಮಿಕರು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular

Recent Comments