ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಸರ್ಕಾರ ನೇಮಿಸಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಪ್ರಸನ್ನಕುಮಾರ್ ಅವರು ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಅವರನ್ನು ಬದಲಾಯಿಸಲು ಸರ್ಕಾರ ಹೊರಟಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಅವರ ಬದಲಾವಣೆಯ ಪ್ರಸ್ತಾಪವೇ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಇಂದು (ಬುಧವಾರ) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದರ್ಶನ್ ಪ್ರಕರಣದಲ್ಲಿ ಯಾವುದೇ ಸಚಿವರು ಒತ್ತಡ ಹಾಕಿಲ್ಲ. ಯಾರು ಏನೇ ಹೇಳಲಿ ಅದನ್ನು ನಾನು ಕೇಳುವುದಿಲ್ಲ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಅವರಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ ಎಂದು ತಿಳಿಸಿದರು.
ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಬದಲಾವಣೆ ಮಾಡುವುದಿಲ್ಲ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಮತ್ತೊಮ್ಮೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿರುವ ಬಸವನಾಗಿದೇವಶ್ರೀ, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಸರ್ಕಾರದಿಂದ ಉತ್ತಮ ನಿರ್ವಹಣೆಯಾಗುತ್ತಿದೆ. ಎಸ್‌ಪಿಪಿ ಪ್ರಸನ್ನಕುಮಾರ್ ಬದಲಾವಣೆಗೆ ಸರ್ಕಾರದ ಮೇಲೆ ಒತ್ತಡವಿದೆ. ಅವರನ್ನು ಕೈಬಿಡುವ ಪ್ರಸ್ತಾಪ ಉಗ್ರವಾಗಿ ಖಂಡಿಸುತ್ತೇವೆ. ಪ್ರಸನ್ನ ಕುಮಾರ್ ಅವರನ್ನೇ ಮುಂದುವರೆಸಲು ಒತ್ತಾಯಿಸಿದರು.