ಚಿಕ್ಕಮಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-2ಕ್ಕೆ ಸಂಬಂಧಿಸಿದಂತೆ ಪರೀಕ್ಷೆಯು ನಾಳೆಯಿಂದ (ಶುಕ್ರವಾರ) ಪ್ರಾರಂಭವಾಗಿ ಜೂ.22ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 9 ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದೆ. ಒಟ್ಟು 2125 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಗೆ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ದತೆ ಮಾಡಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ತಿಳಿಸಿದರು.
ಜಿ.ಪಂ. ಮಿನಿ ಸಭಾಂಗಣದಲ್ಲಿ ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆ-2ಕ್ಕೆ ಸಿದ್ದತೆ ಕುರಿತು ನಡೆದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು. ಸಿ.ಸಿ ಕ್ಯಾಮರಾ ನಿರಂತರವಾಗಿ ಕಾರ್ಯನಿರ್ವಹಿಸುವಂತೆ ಯು.ಪಿ.ಎಸ್ ವ್ಯವಸ್ಥೆ ಇರಬೇಕು ಎಂದು ತಿಳಿಸಿದ ಅವರು. ಯಾವುದೇ ಅಹಿತಕರ ಘಟನೆಗಳಿಗೆ ಅಸ್ಪಾದ ನೀಡದೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವಂತೆ ಹಾಗೂ ಪರೀಕ್ಷೆಯಲ್ಲಿ ಅಕ್ರಮ ನಡೆಸಿದರೆ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಲಾಗುವುದು ಎಂದರು.
ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಹಾಗೂ ತಾಲ್ಲೂಕು ನೋಡಲ್ ಅಧಿಕಾರಿಗಳು, ಹಾಜರಿದ್ದರು.
ಪರೀಕ್ಷಾ ವೇಳಾಪಟ್ಟಿ
ಜೂ. 14ಕ್ಕೆ ಪ್ರಥಮ ಭಾಷೆ ಪರೀಕ್ಷೆ
ಜೂ.15ಕ್ಕೆ ತೃತೀಯ ಭಾಷೆ ಪರೀಕ್ಷೆ
ಜೂ.18ಕ್ಕೆ ಗಣಿತ ಪರೀಕ್ಷೆ
ಜೂ.20ಕ್ಕೆ ವಿಜ್ಞಾನ ಪರೀಕ್ಷೆ
ಜೂ.21ಕ್ಕೆ ಇಂಗ್ಲೀಷ್ ಪರೀಕ್ಷೆ
ಜೂ.22ಕ್ಕೆ ಸಮಾಜ ವಿಜ್ಞಾನ ಪರೀಕ್ಷೆ