Thursday, December 5, 2024
Google search engine
Homeಇ-ಪತ್ರಿಕೆ7ನೇ ವೇತನ ಜಾರಿಗೆ ಕಾದು ನೋಡುವ ತಂತ್ರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಮಾನ

7ನೇ ವೇತನ ಜಾರಿಗೆ ಕಾದು ನೋಡುವ ತಂತ್ರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಮಾನ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಜೂ.23ರಂದು ಬೆಳಗ್ಗೆ 10.30 ಕ್ಕೆ ಕುವೆಂಪು ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ, ಸರ್ವಸದಸ್ಯರ ವಾರ್ಷಿಕ ಮಹಾಸಭೆ ಮತ್ತು ನವೀಕೃತ ಸರ್ಕಾರಿ ನೌಕರರ ಭವನದ ಲೋಕಾರ್ಪಣೆ ಎಂಬ ಮೂರು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿರವರು ತಿಳಿಸಿದರು.

ಬುಧವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಈ ಕಾರ್ಯಕ್ರಮವನ್ನು ಉದ್ಘಾಟಿಸುವರು. ಹಾಗೂ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರರವರು ನವೀಕೃತ ಸರ್ಕಾರಿ ನೌಕರರ ಭವನವನ್ನು ಲೋಕಾರ್ಪಣೆ ಮಾಡಲಿದ್ದಾರೆಂದು ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವ ನೂತನ ವಿಧಾನ ಪರಿಷತ್ ಸದಸ್ಯರು ಹಾಗೂ ನಿಗಮ-ಮಂಡಳಿ-ಪ್ರಾಧಿಕಾರದ ಅಧ್ಯಕ್ಷರನ್ನು ಅಭಿನಂದಿಸಲಾಗುವುದು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಪ್ರತಿವರ್ಷ ರಾಜ್ಯಾದ್ಯಂತ ಸುಮಾರು 10000 ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳಿಗೆ ನಗದು ಪುರಸ್ಕಾರ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಗುತ್ತಿದ್ದು, ಇದರ ಭಾಗವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ 2024ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೆಕಡಾ 90% ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ 400 ಸರ್ಕಾರಿ ನೌಕರರ ಮಕ್ಕಳನ್ನು ಗುರುತಿಸಿ ರೂ. 1000/- ನಗದು ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಗುವುದೆಂದು ತಿಳಿಸಿದರು.

ಸರ್ಕಾರಿ ನೌಕರರಿಗೆ 7 ನೇ ವೇತನ ಜಾರಿ ಮಾಡುವ ಕುರಿತು ಜೂನ್ 30 ರವರೆಗೆ ಕಾಯುವುದಾಗಿ ಅವರು ತಿಳಿಸಿದರು.

7 ನೇ ವೇತನ ಜಾರಿಗೆ ಬೊಮ್ಮಾಯಿ ಸರ್ಕಾರದಲ್ಲೇ ಮನವಿ ಸಲ್ಲಿಸಲಾಗಿತ್ತು. ಈಗಿನ ಸರ್ಕಾರ ಮದ್ಯಾಂತರ ವರದಿಯನ್ನ ತರಿಸಿಕೊಂಡಿದೆ. ಮುಂದಿನದನ್ನು ಕಾದು ನೋಡೋಣ ಎಂದು ಅವರು ಹೇಳಿದರು.

RELATED ARTICLES
- Advertisment -
Google search engine

Most Popular

Recent Comments