ಬೆಂಗಳೂರು: ಜೆಡಿಎಸ್ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧನವಾಗಿದ್ದ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸೂರಜ್ ಬಿಡುಗಡೆ ಹಿನ್ನೆಲೆ ಹಾಸನದಿಂದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಆಗಮಿಸಿದ್ದರು. ಸೂರಜ್ ರೇವಣ್ಣ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಸ್ವಾಗತ ಕೊರಿದರು.
ಜೂನ್ 23 ರಂದು ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಸೂರಜ್ ಇಂದು ಷರತ್ತುಬದ್ದ ಜಾಮೀನಿನ ಮೇಲೆ ಬಿಡುಗಡೆಯಾದರು.
ಜಾಮೀನು ಸಿಕ್ಕ ಬೆನ್ನಲ್ಲೇ ಜೈಲಿನಿಂದ ಬಿಡುಗಡೆಯಾದ ಸೂರಜ್ ರೇವಣ್ಣ ನಮ್ಮ ಕುಟುಂಬದ ವಿರುದ್ದ ಷಡ್ಯಂತ್ರ ನಡೆದಿದ್ದು ಎಲ್ಲದಕ್ಕೂ ಶೀಘ್ರದಲ್ಲೇ ಸ್ಪಷ್ಟೀಕರಣ ನೀಡುವೆ ಎಂದು ಮಾದ್ಯಮದವರೊಂದಗೆ ಹೇಳಿಕೆ ನೀಡಿದರು.