Thursday, December 12, 2024
Google search engine
Homeಇ-ಪತ್ರಿಕೆಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ಗುರಿ

ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ಗುರಿ

ನವೀಕೃತ ಕಚೇರಿ ಉದ್ಘಾಟನೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಶಿವಮೊಗ್ಗ ತಹಶೀಲ್ದಾರ್ ಕಚೇರಿ ಕಟ್ಟಡದಲ್ಲಿರುವ ಸಂಸದ ಬಿ.ವೈ. ರಾಘವೇಂದ್ರ ಅವರ ನವೀಕೃತ ಕಚೇರಿಯ ಉದ್ಘಾಟನೆ ಇಂದು ಪೂಜೆ ಮೂಲಕ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಹ ಸಂಸದ ಬಿ.ವೈ. ರಾಘವೇಂದ್ರ ಅವರು, ಈ ಕಛೇರಿಯನ್ನು ಅತ್ಯಾಧುನಿಕವಾಗಿ ರೂಪಿಸುವುದು ಮುಖ್ಯವಲ್ಲ, ಇಲ್ಲಿ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ಕಛೇರಿಯ ಮುಖ್ಯಗುರಿ. ಈ ನಿಟ್ಟಿನಲ್ಲಿ ನಮ್ಮ ಕಛೇರಿ ಕೆಲಸ ಮಾಡಲಿದೆ ಎಂದರು. ಅಭಿವೃದ್ಧಿ ವಿಷಯದಲ್ಲಿ ಸಂಸದರ ಕಛೇರಿ ಎಂದಿಗೂ ಒಂದು ಹೆಜ್ಜೆ ಮುಂದೆ ಇರಲಿದೆ. ಜನತೆಯ ಕಷ್ಟಸುಖಗಳಿಗೆ ಸ್ಪಂದಿಸಲಿದೆ ಎಂದರು.

ರೈಲ್ವೆ, ಹೆದ್ದಾರಿ, ವಿಮಾನ ನಿಲ್ದಾಣ ಸ್ಥಾಪನೆ, ಪ್ರವಾಸೋದ್ಯಮ ಅಭಿವೃದ್ಧಿ ಹೀಗೆ ಹತ್ತು ಹಲವು ಕ್ಷೇತ್ರದಲ್ಲಿ ಸಂಸದನಾಗಿ ಕೆಲಸ ಮಾಡಿದ್ದೇನೆ. ಇನ್ನೂ ಅನೇಕ ಕೆಲಸಗಳು ಆಗಬೇಕಿದೆ, ಎಲ್ಲವನ್ನೂ ಜನರಿಗಾಗಿ ಮಾಡುವ ತುಡಿತ ಇದೆ ಎಂದು ಅನಿಸಿಕೆ ಹಂಚಿಕೊಂಡರು.

ಈ ಸಂದರ್ಭದಲ್ಲಿ ಶಾಸಕ ಎಸ್. ಎನ್. ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ಮಾಜಿ ಸಚಿವ ಹರತಾಳು ಹಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಪ್ರಮುಖರಾದ ಆರ್.ಕೆ.ಸಿದ್ರಾಮಣ್ಣ, ಪದ್ಮನಾಭ ಭಟ್, ಎಸ್.ದತ್ತಾತ್ರಿ, ಬಳ್ಳೆಕೆರೆ ಸಂತೋಷ್, ಪದ್ಮನಿ, ಸುಮಾ, ಮಾಲತೇಶ್, ವಿನ್ಸೆಂಟ್, ತೇಜಸ್ವಿನಿ ರಾಘವೇಂದ್ರ, ಅರುಣಾದೇವಿ, ನಾಗರಾಜ್ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments