Tuesday, November 5, 2024
Google search engine
Homeಇ-ಪತ್ರಿಕೆದರ್ಶನ್​ಗೆ ಬಿಗ್ ಶಾಕ್ ನೀಡಿದ ನ್ಯಾಯಾಲಯ!​

ದರ್ಶನ್​ಗೆ ಬಿಗ್ ಶಾಕ್ ನೀಡಿದ ನ್ಯಾಯಾಲಯ!​

ಬೆಂಗಳೂರು: ಮನೆ ಊಟ, ಹಾಸಿಗೆ, ಬಟ್ಟೆ ಬೇಕು ಎಂದು ನಟ ದರ್ಶನ್​ ತೂಗುದೀಪ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಇಂದು​ ವಜಾ ಮಾಡಿದೆ.

ಈ ಕುರಿತಂತೆ 24ನೇ ಎಸಿಎಂಎಂ ನ್ಯಾಯಾಲಯ ಇಂದು (ಜು.25) ಆದೇಶ ನೀಡಿದೆ. ಜೈಲು ಊಟದಿಂದ ಅಜೀರ್ಣ, ಅತಿಸಾರ ಆಗಿದೆ ಎಂದು ಕಾರಣ ನೀಡಿ ದರ್ಶನ್ ಅವರು ಮನೆಯ ಊಟ ತರಿಸಲು ಅನುಮತಿ ಕೇಳಿದ್ದರು.

ಜೈಲು ಊಟದಿಂದ ದರ್ಶನ್​ಗೆ ಯಾವುದೇ ಸಮಸ್ಯೆ ಆಗಿಲ್ಲ. ಶೂಟಿಂಗ್ ವೇಳೆ ಆದ ಗಾಯದ ನೋವಿನ ಬಗ್ಗೆ ಮಾತ್ರ ವೈದ್ಯರು ಸಲಹೆ ನೀಡಿದ್ದಾರೆ. ಜೈಲಿನ ನಿಯಮಾವಳಿಯಲ್ಲಿ ಮನೆಯೂಟಕ್ಕೆ ಅವಕಾಶವಿಲ್ಲವೆಂದು ಆಕ್ಷೇಪಣೆ ಸಲ್ಲಿಸಲಾಗಿತ್ತು. ಎರಡೂ ಕಡೆ ವಾದ ಆಲಿಸಿರುವ ಜಡ್ಜ್ ವಿಶ್ವನಾಥ್ ಸಿ ಗೌಡರ್ ಈಗ ಆದೇಶ ನೀಡಿದ್ದಾರೆ.

ಕೊಲೆ ಆರೋಪಿಗಳಿಗೆ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ. ಜೈಲು ನಿಯಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ. ಹೀಗಾಗಿ ದರ್ಶನ್ ಕೊಲೆ ಆರೋಪಿ ಆಗಿರುವುದರಿಂದ ಈ ಸೌಲಭ್ಯ ಕೊಡಲಾಗುವುದಿಲ್ಲ.

RELATED ARTICLES
- Advertisment -
Google search engine

Most Popular

Recent Comments