ಹೊಸನಗರ ತಾಲೂಕು ಬಟಾಣಿಜೆಡ್ಡು ಬಳಿ ಹಳಿ ಮೇಲೆ ಬೃಹತ್ ಮರ ಬಿದ್ದಿದ್ದರಿಂದ ತಾಳುಗುಪ್ಪ – ಬೆಂಗಳೂರು ನಡುವೆ ಸಂಚರಿಸುವ ಇಂಟರ್ಸಿಟಿ ಸಂಚಾರ ಸುಮಾರು 2 ಗಂಟೆ ವಿಳಂಬವಾಗಿರುವ ಘಟನೆ ನಡೆದಿದೆ.
ಭಾರಿ ಮಳೆಯಿಂದಾಗಿ ಇಂದು ಬೆಳಗ್ಗೆ ರೈಲ್ವೆ ಹಳಿ ಮೇಲೆ ಮರ ಬಿದ್ದಿತ್ತು. ಇದನ್ನು ಗಮನಿಸಿದ ಲೋಕೋ ಪೈಲೆಟ್ ರೈಲು ನಿಲ್ಲಿಸಿದ್ದರು. ರೈಲ್ವೆ ಇಲಾಖೆಯ ಇಂಟಿರಿಯರ್ ವರ್ಕ್ ತಂಡದ ಸದಸ್ಯರು ಕೂಡಲೆ ಸ್ಥಳಕ್ಕೆ ತೆರಳಿ ಮರ ತೆರವು ಕಾರ್ಯಾಚರಣೆ ನಡೆಸಿದರು. ರೆಡ್ ಅಲರ್ಟ್: ಮಳೆ ಕುರಿತಂತೆ ಹವಾಮಾನ ಇಲಾಖೆ ವರದಿ ಬಿಡುಗಡೆ ಮಾಡಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜುಲೈ 18 ಹಾಗೂ 19ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಅತೀ ಧಾರಾಕಾರ ಮಳೆ ಸುರಿಯಲಿದೆ