Thursday, December 12, 2024
Google search engine
Homeಇ-ಪತ್ರಿಕೆವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ 14 ದಿನ ನ್ಯಾಯಾಂಗ ಬಂಧನ

ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು:  ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪಿ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿಯಲ್ಲಿದ್ದ ನಾಗೇಂದ್ರ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯಕ್ಕೆ ಇಂದು ಹಾಜರುಪಡಿಸಲಾಯಿತು.

ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ಹಾಜರಾದ ಇ.ಡಿ ವಕೀಲ ಪಿ. ಪ್ರಸನ್ನ ಕುಮಾರ್ ಅವರು, ಪ್ರಕರಣದ ಮತ್ತೊಬ್ಬ ಆರೋಪಿಯ ನ್ಯಾಯಾಂಗ ಬಂಧನದಲ್ಲಿರುವ ಹೈದರಾಬಾದ್‌ನ ಸತ್ಯನಾರಾಯಣ ವರ್ಮ ಅವರನ್ನು ಬಾಡಿ ವಾರಂಟ್ ಮುಖಾಂತರ ವಶಕ್ಕೆ ನೀಡುವಂತೆ ಕೋರಿದರು.

ಈ ಮನವಿಯನ್ನು ಮಾನ್ಯ ಮಾಡಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಆರೋಪಿ ಸತ್ಯನಾರಾಯಣ ವರ್ಮ ಅವರನ್ನು ಮಂಗಳವಾರ (ಜು.23) ಕೋರ್ಟ್‌ಗೆ ಹಾಜರುಪಡಿಸುವಂತೆ ಆದೇಶಿಸಿದರು. ಅಂತೆಯೇ ನಾಗೇಂದ್ರ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

ನಾಗೇಂದ್ರ ಪರ ಹೈಕೋರ್ಟ್‌ನ ಹಿರಿಯ ವಕೀಲ ಎಂ. ಎಸ್. ಶ್ಯಾಮ್‌ ಸುಂದರ್ ಹಾಜರಿದ್ದರು.

RELATED ARTICLES
- Advertisment -
Google search engine

Most Popular

Recent Comments