Thursday, December 5, 2024
Google search engine
Homeಇ-ಪತ್ರಿಕೆಭದ್ರಾ ಡ್ಯಾಂನಿಂದ ಇಂದಿನಿಂದಲೇ ನಾಲೆಗಳಿಗೆ ನೀರು: ಮಧುಬಂಗಾರಪ್ಪ

ಭದ್ರಾ ಡ್ಯಾಂನಿಂದ ಇಂದಿನಿಂದಲೇ ನಾಲೆಗಳಿಗೆ ನೀರು: ಮಧುಬಂಗಾರಪ್ಪ

ಶಿವಮೊಗ್ಗ:ಭದ್ರಾ ಡ್ಯಾಂನಿಂದ ಇಂದಿನಿಂದಲೇ ನಾಲೆಗಳಿಗೆ ನೀರು ಬಿಡಲು ತೀರ್ಮಾನ ಮಾಡಲಾಗಿದೆ ಎಂದು ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.

ಅವರು ಇಂದು ಕಾಡಾ ಕಚೇರಿಯಲ್ಲಿ ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಬಾರಿ ಬರಗಾಲದಿಂದ ತತ್ತರಿಸಿ ಹೋಗಿದ್ದೆವು. ಈ ಬಾರಿ ಜಿಲ್ಲೆಯ ಎಲ್ಲಾ ಡ್ಯಾಂಗಳು ಭರ್ತಿಯಾಗುವ ಹಂತಕ್ಕೆ ತಲುಪಿವೆ. ಕೆಲವೊಂದು ಪ್ರದೇಶಗಳಿಗೆ ಈ ಬಾರಿಯೂ ನೀರು ತಲುಪಿಲ್ಲ ಎಂದು ರೈತರು ಆರೋಪಿಸಿದ ಹಿನ್ನಲೆಯಲ್ಲಿ ಇಂದಿನಿಂದಲೇ ನಿರಂತರವಾಗಿ ನೀರು ಬಿಡಲು ತೀರ್ಮಾನಿಸಲಾಗಿದೆ. ರೈತರ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇವೆ. ಅನೇಕ ಕಡೆ ಭತ್ತವನ್ನು ನಿಲ್ಲಿಸಿ ಅಡಿಕೆ ಬೆಳೆಯಾಕಿದ್ದಾರೆ. ಬೇಸಿಗೆಯಲ್ಲಿ ಅಡಿಕೆಗೆ ಹೆಚ್ಚು ನೀರು ಬೇಕಾಗುತ್ತದೆ. ಅದನ್ನು ದೃಷ್ಟಿಯಲ್ಲಿಟ್ಟುಕೊಂಡು ನೀರಾವರಿ ಇಂಜಿನಿಯರ್‌ಗಳು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದರು.

ಚಾನಲ್‌ನಿಂದ ಅನಧಿಕೃತ ಪಂಪ್‌ಸೆಟ್‌ಗಳ ಮೂಲಕ ನೀರು ಪಡೆಯುತ್ತಿದ್ದು, ಅದನ್ನು ನಿಲ್ಲಿಸಲು ಆ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದೇವೆ. ನೀರು ಪೋಲಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಡಾ. ಅಂಶುಮಾನ್, ಶಾಸಕರಾದ ಶಾರದ ಪೂರ್‍ಯನಾಯ್ಕ್, ಹರೀಶ್, ಬಲ್ಕಿಶ್‌ಬಾನು, ಶಾಂತನಗೌಡ, ಬಸವರಾಜ್,ಮಾಜಿ ಶಾಸಕ ಆರ್.ಪ್ರಸನ್ನಕುಮಾರ್, ರೈತ ನಾಯಕರಾದ ಹೆಚ್.ಆರ್.ಬಸವರಾಜಪ್ಪ, ಕೆ.ಟಿ.ಗಂಗಾಧರ್, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್ ಹಾಗೂ ಕಾಡಾದ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular

Recent Comments