ಶಿವಮೊಗ್ಗ: ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಡಿಎಆರ್ ಪೊಲೀಸ್ ಸಭಾಂಗಣ ಶಿವಮೊಗ್ಗ ದಲ್ಲಿ, ಜಿಲ್ಲಾಧಿಕಾರಿ ಗುರುದತ್ ಹೆಗ್ಡೆ, ಮತ್ತು ಪೊಲೀಸ್ ಅಧೀಕ್ಷಕರಾದ ಮಿಥುನ್ ಕುಮಾರ್ ಜಿ.ಕೆ.ಯವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಶಾಂತಿ ಸಮಿತಿ ಸಭೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಭೆಯನ್ನುದ್ದೇಶಿಸಿ ಮಾತನಾಡಿ, ಹಬ್ಬವನ್ನು ಎಲ್ಲರೂ ಸೇರಿ ಸಹಬಾಳ್ವೆಯಿಂದ ಆಚರಣೆ ಮಾಡಬೇಕು, ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾಡಳಿತವು ಎಲ್ಲಾ ತಯಾರಿಯನ್ನು ಮಾಡಿಕೊಂಡಿದ್ದು, ಹಬ್ಬವನ್ನು ಧಾರ್ಮಿಕ ಮನೋಭಾವದಿಂದ ಎಲ್ಲಾ ಸಮುದಾಯವರೂ ಸೇರಿಕೊಂಡು ಶಾಂತ ರೀತಿಯಲ್ಲಿ ಆಚರಣೆ ಮಾಡೋಣ ಎಂದರು.
ಯುವ ಪೀಳಿಗೆಯು ಯಾವುದೇ ಮಾಹಿತಿಯ ಸತ್ಯಾಸತ್ಯತೆಯ ಬಗ್ಗೆ ತಿಳಿಯದೇ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುತ್ತಾರೆ. ಈ ಕುರಿತು ಯಾವುದೇ ಘಟನೆಗೆ ಸಂಬಂದಿಸಿದಂತೆ ಜವಾಬ್ದಾರಿಯುತವಾಗಿ ವರ್ತಿಸುವಂತೆ ಪ್ರಮುಖವಾಗಿ ಯುವ ಪೀಳಿಗೆಗೆ ತಿಳಿಹೇಳಿದರು.
ಯಾವುದೇ ಹಬ್ಬವನ್ನು ಆಚರಣೆ ಮಾಡುವಾಗ ನಾವೆಲ್ಲರೂ ವಿಜೃಂಬಣೆಯಿಂದ ಹಬ್ಬವನ್ನು ಆಚರಿಸುತ್ತೇವೆ. ಆದ್ದರಿಂದ ಹಬ್ಬದ ಆಚರಣೆಗೆ ಎಲ್ಲರೂ ಸಹಾಕರ ನೀಡುವುದು ಮುಖ್ಯವಾಗಿರುತ್ತದೆ ಎಂದು ಪೊಲೀಸ್ ಅಧೀಕ್ಷಕರಾದ ಮಿಥುನ್ ಕುಮಾರ್ ಜಿ.ಕೆ. ರವರು ಹೇಳಿದರು.
ಜಿಲ್ಲೆಯಾದ್ಯಂತ ಈಗಾಗಲೇ ಠಾಣಾ ಮಟ್ಟದಲ್ಲಿ ಮೊಹಲ್ಲಾ ಸಭೆ ಮತ್ತು ಬೀಟ್ ಸಮಿತಿ ಸಭೆಗಳನ್ನು ನಡೆಸಲಾಗುತ್ತಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಒತ್ತು ನೀಡಿ ಇನ್ನು ಹೆಚ್ಚಿನ ಸಭೆಗಳನ್ನು ನಡೆಸಲಾಗುವುದು. ಯಾವುದೆ ಸಮಸ್ಯೆ ಇದ್ದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದಾಗ ಕಾನೂನು ಚೌಕಟ್ಟಿನ ಒಳಗೆ ಸಮಸ್ಯೆಯನ್ನು ಮೂಲದಲ್ಲಿಯೇ ಬಗೆಹರಿಸಲು ಸಾಧ್ಯವಿರುತ್ತದೆ ಎಂದರು.
ಈ ಸಂದರ್ಭದಲ್ಲಿ ಆಯುಕ್ತರು ಮಹಾನಗರ ಪಾಲಿಕೆಯ ಮಾಯಣ್ಣ ಗೌಡ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರಡ್ಡಿ, ಎ ಜಿ ಕಾರ್ಯಪ್ಪ, ಉಪ ನಿರ್ದೇಶಕರು, ಪಶು ವೈಧ್ಯಕೀಯ ಇಲಾಖೆಯ ಶಿವಯೋಗಿ ಮತ್ತು ಎಲ್ಲಾ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.