Tuesday, November 5, 2024
Google search engine
Homeಇ-ಪತ್ರಿಕೆರಾಜ್ಯಪೋಕ್ಸೋ ಪ್ರಕರಣ: ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದ ಯಡಿಯೂರಪ್ಪ

ಪೋಕ್ಸೋ ಪ್ರಕರಣ: ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದ ಯಡಿಯೂರಪ್ಪ

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಅಪರಾಧ ತನಿಖಾ ಇಲಾಖೆ (ಸಿಐಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಮಾರ್ಚ್ 14ರ ಪ್ರಕರಣಕ್ಕೆ ಸಂಬಂಧಿಸಿ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಸಿಐಡಿಗೆ ತಡೆಯಾಜ್ಞೆ ನೀಡಿದೆ.

ಯಡಿಯೂರಪ್ಪ ವಿರುದ್ಧ 17 ವಯಸ್ಸಿನ ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಪೋಕ್ಸೊ ಕಾಯಿದೆ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ವರ್ಷದ ಫೆಬ್ರವರಿ ೨ರಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ಮನೆಯಲ್ಲಿ ತನ್ನ ಮಗಳಿಗೆ ಕಿರುಕುಳ ನೀಡಿದ್ದಾರೆ ಎಂದು ಬಾಲಕಿಯ ತಾಯಿ ಆರೋಪಿಸಿದ್ದರು.

ಈ ಆರೋಪವನ್ನು ಯಡಿಯೂರಪ್ಪ ತಳ್ಳಿಹಾಕಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments