ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿದ್ದರು.
ಸತತ 3 ಗಂಟೆ ಕಾಲ ಯಡಿಯೂರಪ್ಪ ವಿಚಾರಣೆ ಎದುರಿಸಿದ್ದಾರೆ. ಪ್ರಕರಣದ ತನಿಖಾಧಿಕಾರಿಗಳು ವಿಚಾರಣೆ ನಡೆಸಿ ಮಾಹಿತಿ ಕಲೆಹಾಕಿದ್ದಾರೆ. ವಿಚಾರಣೆ ನಂತರ ಯಡಿಯೂರಪ್ಪ ತಮ್ಮ ನಿವಾಸಕ್ಕೆ ಹಿಂದಿರುಗಿದ್ದಾರೆ.
ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳದ ಆರೋಪ ಯಡಿಯೂರಪ್ಪ ಅವರ ಮೇಲಿದೆ. ಹಲವು ಬಾರಿ ನೋಟಿಸ್ ನೀಡಿದರೂ ಆರೋಪಿ ಹಾಜರಾಗುತ್ತಿಲ್ಲವೆಂದು ಸಿಐಡಿ ನ್ಯಾಯಾಲಯದ ಮೊರೆ ಹೋಗಿತ್ತು. ಈ ಹಿಂದೆ ವಿಶೇಷ ನ್ಯಾಯಾಲಯವು ಬಂಧನಕ್ಕೆ ವಾರೆಂಟ್ ಜಾರಿ ಮಾಡಲು ಆದೇಶಿಸಿತ್ತು.
ಶುಕ್ರವಾರ ಹೈಕೋರ್ಟ್‌ನಲ್ಲಿ ಬಂಧನ ಮಾಡದಂತೆ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಸದ್ಯ ವಿಚಾರಣೆ ನಡೆಸಿದ ಹೈಕೋರ್ಟ್, ಬಂಧನ ಮಾಡದಂತೆ ಸೂಚನೆ ನೀಡಿತ್ತು ಮತ್ತು ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.