ಬೆಂಗಳೂರು: ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ವಿಚಾರಣೆಗೆ ಹಾಜರಾಗುವಂತೆ ನಗರದ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಯಡಿಯೂರಪ್ಪ ಮತ್ತು ಇತರ 3 ಜನ ಆರೋಪಿಗಳಿಗೆ ಜು. 15ಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದ ಸಮನ್ಸ್ ಜಾರಿಗೊಳಿಸಿದೆ.
ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶ ಎನ್.ಎಂ.ರಮೇಶ್ ಗುರುವಾರ ವಿಚಾರಣೆ ನಡೆಸಿ ಸಮನ್ಸ್ ಜಾರಿಗೊಳಿಸಿದೆ.
ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯಡಿಯೂರಪ್ಪರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾ.14ರಂದು ಪ್ರಕರಣ ದಾಖಲಾಗಿತ್ತು.