ಪತ್ರಿಕಾಗೋಷ್ಟಿಯಲ್ಲಿ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಜ್ಯೋತಿಪ್ರಕಾಶ್ ಮಾಹಿತಿ
ಶಿವಮೊಗ್ಗ : ನಗರ ಸಮೀಪದ ಹರಕೆರೆ ಗ್ರಾಮದ ಶಂಕರ ಕಣ್ಣಿನ ಆಸ್ಪತ್ರೆ ಪಕ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಜಗದ್ಗುರು ರಂಭಾಪುರೀಶ ನಿವಾಸದ ಉದ್ಘಾಟನಾ ಸಮಾರಂಭವು ಜು.03 ರಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಜರುಗಲಿದೆ ಎಂದು ಶ್ರೀ ಜಗದ್ಗುರು ರಂಭಾಪುರೀಶ ನಿವಾಸ ಕಟ್ಟಡ ನಿರ್ಮಾಣ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಜ್ಯೋತಿಪ್ರಕಾಶ್ ಹೇಳಿದರು.
ಸೋಮವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11.00 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ಕಟ್ಟಡದ ಉದ್ಘಾಟನೆಯನ್ನು ನೆರೆವೇರಿಸುವರು. ಸಮಾರಂಭವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು. ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ(ರಿ)ಯ ಗೌರವಾಧ್ಯಕ್ಷ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸುವರು. ಅಧ್ಯಕ್ಷ ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ಸಾನಿಧ್ಯ ವಹಿಸುವರು ಎಂದರು.
ಮುಖ್ಯ ಅತಿಥಿಗಳಾಗಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ ಹಾಗೂ ಡಿ.ಎಸ್.ಅರುಣ್, ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಮಾಜಿ ಶಾಸಕರಾದ ಹೆಚ್.ಎಂ.ಚಂದ್ರಶೇಖರಪ್ಪ, ಆಯನೂರು ಮಂಜುನಾಥ್ ಉಪಸ್ಥಿತರಿರುವರು ಎಂದರು.
ಮಳಲಿ ಡಾ. ನಾಗಭೂಷಣ ಶಿವಾಚಾರ್ಯರು, ಬಿಳಕಿ ರಾಚೋಟೇಶ್ವರ ಶಿವಾಚಾರ್ಯರು, ಕಡೆನಂದಿಹಳ್ಳಿ ರೇವಣಸಿದ್ದೇಶ್ವರ ಶಿವಾಚಾರ್ಯರು, ಹಣ್ಣೆಮಠದ ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯರು, ಹುಣಸಘಟ್ಟದ ಗುರುಮೂರ್ತಿ ಶಿವಾಚಾರ್ಯರು, ಬೀರೂರು ರುದ್ರಮುನಿ ಶಿವಾಚಾರ್ಯರು, ತಾವರೆಕೆರೆ ಡಾ. ಅಭಿನವ ಸಿದ್ದಲಿಂಗ ಶಿವಾಚಾರ್ಯರು, ಚನ್ನಗಿರಿ ಡಾ. ಕೇದಾರ ಶಿವಶಾಂತವೀರ ಶಿವಾಚಾರ್ಯರು, ನಂದಿಪುರದ ನಂದೀಶ್ವರ ಶಿವಾಚಾರ್ಯರು, ರಟ್ಟಿಹಳ್ಳಿ ವಿಶ್ವೇಶ್ವರ ದೇವರು ಕಬ್ಬಿಣಕಂತಿಮಠ ನುಡಿನಮನ ಸಲ್ಲಿಸುವರು. ಭೂ ದಾನಿಗಳಾದ ಟಿ.ವಿ.ಈಶ್ವರಯ್ಯ ಸಹೋದರರು ಸೇರಿದಂತೆ ಗಣ್ಯರಿಗೆ ಮತ್ತು ದಾನಿಗಳಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆ ನೀಡಿ ಆಶೀರ್ವದಿಸುವರು ಎಂದರು.