Saturday, January 18, 2025
Google search engine
Homeಇ-ಪತ್ರಿಕೆವಾಹನಗಳಲ್ಲಿ ಎಲ್​ಇಡಿ ಲೈಟ್ ಇದ್ದರೆ ಕೇಸ್!

ವಾಹನಗಳಲ್ಲಿ ಎಲ್​ಇಡಿ ಲೈಟ್ ಇದ್ದರೆ ಕೇಸ್!

ಬೆಂಗಳೂರು: ವಾಹನಗಳಲ್ಲಿ ಎಲ್​ಇಡಿ ಲೈಟ್​ಗಳನ್ನು ಅಳವಡಿಸುವುದರಿಂದ ಎದುರಿನಿಂದ ಬರುವ ವಾಹನಗಳ ಚಾಲಕರಿಗೆ ತೊಂದರೆಯಾಗುತ್ತಿದೆ. ಇದು ಅಪಘಾತಕ್ಕೂ ಕಾರಣವಾಗುತ್ತಿದೆ. ಉಲ್ಲಂಘಿಸಿದರಿಗೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್  ಕುಮಾರ್ ಮಾಹಿತಿ ನೀಡಿದ್ದಾರೆ.

ರಸ್ತೆ ಅಪಘಾತಗಳನ್ನು ತಡೆಗಟ್ಟಲು  ಕೇಂದ್ರ ಮೋಟಾರು ವಾಹನಗಳ ನಿಯಮಗಳ ಅಡಿಯಲ್ಲಿ ಅನುಮತಿಸಲಾದ ಲೈಟ್​ಗಳನ್ನು ಮಾತ್ರ ವಾಹನಗಳಲ್ಲಿ ಅಳವಡಿಸಬೇಕು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ ಎಂದು ಅಲೋಕ್ ಕುಮಾರ್ ‘ಎಎನ್​ಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ವಾಹನಗಳಲ್ಲಿ ಕೇಂದ್ರ ಮೋಟಾರು ವಾಹನಗಳ ನಿಯಮಗಳ ಅಡಿಯಲ್ಲಿ ನಮೂದಿಸಿರುವ ಮಾನದಂಡದಂತೆ ಲೈಟ್​​ಗಳನ್ನು ಅಳವಡಿಸುವ ಕುರಿತು ಸಚಾರಿ ಪೊಲೀಸರಿಗೆ ಆದೇಶ ಹೊರಡಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು ಇದರಿಂದ ಎದುರು ಬದಿಯಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವು ತೊಂದರೆಯುಂಟಾಗುತ್ತಿದೆ. ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬಂದಿರುತ್ತದೆ. ಈ ಪೈಕಿ ಪ್ರಮುಖವಾಗಿ ಭಾರಿ ಗಾತ್ರ ವಾಹನಗಳಾದ ಲಾರಿ, ಟ್ರಕ್, ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ತಮ್ಮ ವಾಹನಗಳಲ್ಲಿ ಅಳವಡಿಸುತ್ತಿರುವುದರಿಂದ ಇತರೆ ವಾಹನ ಚಾಲಕರುಗಳಿಗೆ ವಾಹನ ಚಲಾಯಿಸಲು ತೊಂದರೆಯಾಗು ತ್ತಿರುತ್ತದೆ. ಒಂದು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅಂತಹ ವಾಹನ ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲಿಸಬಹುದಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ವಾಹನಗಳಲ್ಲಿ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನ ಚಾಲಕರ ವಿರುದ್ಧ ಜುಲೈನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣಗಳನ್ನು ದಾಖಲಿಸಿ, ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸಬೇಕು ಎಂದೂ ಸೂಚನೆ ನೀಡಲಾಗಿದೆ.

RELATED ARTICLES
- Advertisment -
Google search engine

Most Popular

Recent Comments