ಶಿವಮೊಗ್ಗ: ಜೂ.26ರ ಬೆಳಗ್ಗೆ 9.30ಕ್ಕೆ ಎಲ್ .ಬಿ.ಎಸ್. ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಆರ್ಯ ವಿಜ್ಞಾನ ಪಿಯು ಕಾಲೇಜಿನ ನೂತನ ಕಟ್ಟಡವನ್ನು ಶೃಂಗೇರಿ ಶಾರದಾ ಪೀಠದ ವಿಧುಶೇಖರ ಭಾರತೀ ಶ್ರೀಯವರು ಉದ್ಘಾಟಿಸಲಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಎನ್.ರಮೇಶ್ ಹೇಳಿದರು.
ಶನಿವಾರ ಆರ್ಯ ವಿಜ್ಞಾನ ಪಿಯು ಕಾಲೇಜಿನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಉದ್ಘಾಟನೆಯ ಸಂದರ್ಭದಲ್ಲಿ ಶಿವಮೊಗ್ಗ ಶೃಂಗೇರಿ ಮಠದ ಧರ್ಮಾಧಿಕಾರಿ ಡಾ.ಪಿ.ನಾರಾಯಣ, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿಯವರು ಉಪಸ್ಥಿತರಿವರು ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಖಜಾಂಚಿ ಬಿ.ಜೆ.ಸುನೀತಾ ದೇವಿ, ಪ್ರೊ.ಕಣ್ಣನ್, ಪ್ರಕಾಶ್ ಭಟ್ ಉಪಸ್ಥಿತರಿದ್ದರು.