Tuesday, January 14, 2025
Google search engine
Homeಇ-ಪತ್ರಿಕೆದರ್ಶನ್ ಪ್ರಕರಣ ಕುರಿತು ಇನ್‌ಸ್ಟಾಗ್ರಾಂ ಪೋಸ್ಟ್ ಹಾಕಿದ ನಟಿ ರಚಿತಾರಾಮ್

ದರ್ಶನ್ ಪ್ರಕರಣ ಕುರಿತು ಇನ್‌ಸ್ಟಾಗ್ರಾಂ ಪೋಸ್ಟ್ ಹಾಕಿದ ನಟಿ ರಚಿತಾರಾಮ್

ಬೆಂಗಳೂರು: ಉಪೇಂದ್ರ ಅವರು ದರ್ಶನ್‌ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಬಳಿಕ ನಟಿ ರಚಿತಾ ರಾಮ್ ಮಾತನಾಡಿದ್ದಾರೆ. 

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ತಮ್ಮ ಅಭಿಪ್ರಾಯವನ್ನು ಬರೆದುಕೊಂಡಿದ್ದಾರೆ.

ನಮಸ್ಕಾರ ಈ ನೋಟ್‌ನ ನಾನು ನಟಿಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ.

ಇತ್ತೀಚಿಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು! ಮೊದಲನೇಯಾದಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ. ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೆ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತಿರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತಿರಿ ಎಂದು ಆಶಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments