Thursday, January 16, 2025
Google search engine
Homeಇ-ಪತ್ರಿಕೆಡಿ.27: ನಗರಕ್ಕೆ ಸುತ್ತೂರು ಜಾತ್ರಾ ಮಹೋತ್ಸವ ಪ್ರಚಾರ ರಥ

ಡಿ.27: ನಗರಕ್ಕೆ ಸುತ್ತೂರು ಜಾತ್ರಾ ಮಹೋತ್ಸವ ಪ್ರಚಾರ ರಥ

ಶಿವಮೊಗ್ಗ : ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವವು ಜ.26 ರಿಂದ 31 ರವರೆಗೆ ಶ್ರೀ ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಡೆಯಲಿದ್ದು ಅದರ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಜಾತ್ರಾ ಮಹೋತ್ಸವ ಪ್ರಚಾರದ ರಥ ಯಾತ್ರೆಯು ಡಿ.27 ರಂದು ಸಂಜೆ 4.00 ಗಂಟೆಗೆ ನಗರದ ಮಲವಗೊಪ್ಪಕ್ಕೆ ಆಗಮಿಸಲಿದೆ ಎಂದು ಸುತ್ತೂರು ಜಾತ್ರಾ ಸಂಚಾಲಕರಾದ ಹೊಳಲೂರು ನಿಂಗಪ್ಪ ತಿಳಿಸಿದರು

ಗುರುವಾರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುತ್ತೂರು ಜಾತ್ರಾ ಮಹೋತ್ಸವ ಪ್ರಚಾರ ರಥದಲ್ಲಿ ಆದಿ ಜಗದ್ಗುರುಗಳವರ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿರುವುದರಿಂದ ಮಲವಗೊಪ್ಪದ ಶ್ರೀ ಚೆನ್ನಬಸವೇಶ್ವರ ದೇವಸ್ಥಾನದ ಬಳಿ ಮಂಗಳವಾದ್ಯಗಳೊಂದಿಗೆ ಭಕ್ತಿಪೂರ್ವಕವಾಗಿ ಬರಮಾಡಿಕೊಳ್ಳಲಾಗುವುದು. ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥಯಾತ್ರೆಯು ಶಿವಮೊಗ್ಗದಲ್ಲಿ ಎರಡು ದಿನಗಳ ಕಾಲ ಇರುತ್ತದೆ ಎಂದರು.

ಈ ಕಾರ್ಯಕ್ರಮದ ಸಾನಿಧ್ಯವನ್ನು ಮುರುಘಮಠದ ಶ್ರೀ ಮನ್ಮರಾಜ ನಿರಂಜನ ಜಗದ್ಗುರು ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರು, ಆನಂದಪುರಂನ ಶಿವಮೊಗ್ಗ ಚಿಕ್ಕಮಗಳೂರು ಬಸದ ಕೇಂದ್ರದ ಡಾ. ಶ್ರೀ ಬಸವಮರುಳ ಸಿದ್ದ ಸ್ವಾಮಿಗಳವರು, ಲೋಕಸಭಾ ಸದಸ್ಯರು, ವಿಧಾನಸಭೆ, ವಿಧಾನ ಪರಿಷತ್ ಸದಸ್ಯರುಗಳು, ರಾಜಕೀಯ ಗಣ್ಯವ್ಯಕ್ತಿಗಳು, ಅಧಿಕಾರ ವರ್ಗದವರು, ಶ್ರೀ ಮಠದ ಅಭಿಮಾನಿಗಳು, ಭಕ್ತರು ಪುಷ್ಪಹಾರ ಹಾಕುವುದರ ಮೂಲಕ ಬರಮಾಡಿಕೊಳ್ಳಲಿದ್ದು, ಈ ಕಾರ್ಯಕ್ರಮಕ್ಕೆ ಶ್ರೀ ಮಠದ ಅಭಿಮಾನಿಗಳು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದರು.

ಜಾತ್ರಾ ಮಹೋತ್ಸವವು ಪ್ರತಿವರ್ಷ ಪುಷ್ಯ ಬಹುಳ ದ್ವಾದಶಿಯಂದು ಪ್ರಾರಂಭವಾಗುತ್ತದೆ. ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹ, ರಥೋತ್ಸವ, ಶ್ರೀ ವೀರಭದ್ರೇಶ್ವರ ಕೊಂಡೋತ್ಸವ, ಶ್ರೀ ಮಹಾದೇಶ್ವರ ಕೊಂಡೋತ್ಸವ, ಲಕ್ಷದೀಪೋತ್ಸವ, ಶ್ರೀ ಮಹಾದೇಶ್ವರ ಮುತ್ತಿನ ಪಲ್ಲಕಿ ಉತ್ಸವ, ತೆಪ್ಪೋತ್ಸವ, ಕೃಷಿ ವಸ್ತು ಪ್ರದರ್ಶನ ಜರುಗುತ್ತವೆ. ಆರು ದಿನಗಳವರೆಗೆ ನಡೆಯುವ ಈ ಸಂಭ್ರಮ ಜಾತ್ರೆಯಲ್ಲಿ ಜನತೆಯ ಸರ್ವಾಂಗಿಣ ಪ್ರಗತಿಗೆ ಪೂರಕವಾದ ಹಲವಾರು ವೈವಿದ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಎಲ್ಲಾ ಕಾರ್ಯಕ್ರಮಗಳು ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರು, ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ, ಶ್ರೀ ಸುತ್ತೂರು ಕ್ಷೇತ್ರ ಇವರ ದಿವ್ಯ ಸಾನಿಧ್ಯದಲ್ಲಿ ನಡೆಯುತ್ತದೆ ಎಂದರು.

ಮಾಜಿ ಶಾಸಕರಾದ ಹೆಚ್.ಎಂ.ಚಂದ್ರಶೇಖರ್ ಮಾತನಾಡಿ, ಪ್ರತಿ ವರ್ಷವೂ ಈ ಜಾತ್ರಾ ಮಹೋತ್ಸವ ಅತ್ಯಂತ ಸಂಭ್ರಮದಿಂದ ನಡೆಯುತ್ತದೆ. ಸುತ್ತೂರು ಕ್ಷೇತ್ರದಲ್ಲಿ ಸಾವಿರಾರು ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ನೀಡಲಾಗಿದೆ. ಅದೇ ರೀತಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೂ ಕಡುಬಡ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯಾಸಂಸ್ಥೆಯನ್ನು ಮಾಡಿ ವಿದ್ಯಾಭ್ಯಾಸ ಕೊಡಬೇಕು ಎಂದು ಒತ್ತಾಯಿಸಿದರು.

ಬಸವ ಕೇಂದ್ರದ ಅಧ್ಯಕ್ಷರಾದ ಬೆನಕಪ್ಪ ಮಾತನಾಡಿ, ಸತ್ತೂರು ಕ್ಷೇತ್ರದ ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತುಕೊಡಬೇಕು. ಸುತ್ತೂರು ಕ್ಷೇತ್ರ ಸ್ವಚ್ಛತೆ ಮತ್ತು ಆತಿಥ್ಯಕ್ಕೆ ಹೆಸರುವಾಸಿಯಾಗಿದೆ. ಸರ್ವೋತ್ತಿನಲ್ಲಿ ಹೋದರು ಕೂಡ ಉತ್ತಮವಾದ ಆತಿಥ್ಯದೊಂದಿಗೆ ಪ್ರಸಾದ ನೀಡಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಅಶ್ವಾತ್ ನಾರಾಯಣ ಶೆಟ್ಟರು, ಮಂಜು ಕರ್ನಲ್, ಹರ್ಷ ಕಾಮತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments