ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಮೂಗಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆ ಚಿಕಿತ್ಸೆ ಪಡೆದು ನಂತರ ಹಿಂದಿರುಗಿದ್ದಾರೆ.
ನಗರ ಖಾಸಗಿ ಹೋಟೆಲ್ ನಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳ ಜತೆ ಮಾತನಾಡುವ ಸಂದರ್ಭದಲ್ಲಿ ಸಚಿವರಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಯಿತು.
ಕೂಡಲೇ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ಸಚಿವರನ್ನು ವೈದ್ಯರು ಕೆಲ ಗಂಟೆಗಳ ಕಾಲ ನಿಗಾದಲ್ಲಿ ಇರಿಸಿ ಅವಲೋಕನ ಮಾಡಿದರು. ಬಳಿಕ ಸೂಕ್ತ ಚಿಕಿತ್ಸೆ ನೀಡಿ ಅವರನ್ನು ಮನೆಗೆ ಕಳಿಸಿಕೊಟ್ಟರು.
ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಮಾತನಾಡಿದ ಕುಮಾರಸ್ವಾಮಿ ಅವರು, ಯಾರು ಆತಂಕಕ್ಕೆ ಒಳಗಾಗುವುದು ಅವಶ್ಯಕತೆ ಇಲ್ಲ ಎಂದರು.
ಮೂರು ಬಾರಿ ನನಗೆ ಹೃದಯ ಕವಾಟನ್ನು ಬದಲಾವಣೆ ಮಾಡಲಾಗಿದೆ. ಬ್ಲಡ್ ತಿನ್ನರ್ ಮಾತ್ರೆ ತೆಗೆದುಕೊಳ್ಳುತ್ತೇನೆ. ರಕ್ತ ಗಟ್ಟಿ ಆಗಬಾರದು ಎನ್ನುವ ಕಾರಣಕ್ಕೆ ಈ ಮಾತ್ರೆ ತೆಗೆದುಕೊಳ್ಳುತ್ತೇನೆ. ಒತ್ತಡ ಜಾಸ್ತಿಯಾದಾಗ, ವಿಶ್ರಾಂತಿ ಇಲ್ಲದೆ ಇದ್ದಾಗ ನನಗೆ ಮೂಗಿನಿಂದ ರಕ್ತಸ್ರಾವ ಆಗುವುದು ಸಹಜ ಎಂದರು.