Saturday, May 24, 2025
Google search engine
Homeಇ-ಪತ್ರಿಕೆಭಯೋತ್ಪಾದಕರ ದಾಳಿಗೆ ಮಂಜುನಾಥ್ ಬಲಿ: ಮುಖಂಡರ ಸಾಂತ್ವಾನ

ಭಯೋತ್ಪಾದಕರ ದಾಳಿಗೆ ಮಂಜುನಾಥ್ ಬಲಿ: ಮುಖಂಡರ ಸಾಂತ್ವಾನ

ಶಿವಮೊಗ್ಗ: ಭಯೋತ್ಪಾದಕರ ದಾಳಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥ್ ಮನೆಯಲ್ಲಿ ನೀರವ ಮೌನ ಆವರಿಸಿದೆ.

ಇಂದು ಬೆಳಗಿನಿಂದಲೇ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಬೇಳೂರು ಗೋಪಾಲಕೃಷ್ಣ, ಬಲ್ಕೀಶ್ ಬಾನು, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಮೊದಲಾದ ರಾಜಕೀಯ ಮುಖಂಡರು, ಅಧಿಕಾರಿಗಳು ಮಂಜುನಾಥ್ ಅವರ ನಿವಾಸಕ್ಕೆ ತೆರಳಿ ಅವರ ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಮಂಜುನಾಥ್ ಅವರ ಪಾರ್ಥಿವ ಶರೀರ ನಾಳೆ ಬೆಳಗ್ಗೆ 6 ಗಂಟೆಯೊಷ್ಟರೊಳಗೆ ಬರಬಹುದು ಎಂಬ ನಿರೀಕ್ಷೆ ಇದೆ. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳು ಕೂಡ ಸಂಪರ್ಕದಲ್ಲಿದ್ದಾರೆ ಎಂದರು.

ಭಯೋತ್ಪಾದಕರ ದಾಳಿಯಲ್ಲಿ ಮೂವರು ಕನ್ನಡಿಗರು ಬಲಿಯಾಗಿದ್ದು, ಅವರ ಮೃತದೇಹಗಳನ್ನು ತರಲು ಹಾಗೂ ಗಾಯಾಳುಗಳ ಚಿಕಿತ್ಸೆಗೆ, ಅಲ್ಲಿಗೆ ತೆರಳಿರುವ ಕನ್ನಡಿಗರ ರಕ್ಷಣೆಯಾಗಿ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ಸರ್ಕಾರ ಕಳುಹಿಸಿದ್ದು, ಸಚಿವ ಸಂತೋಷ್ ಲಾಡ್ ಅವರೊಂದಿಗೆ ನಾನು ಸಂಪರ್ಕದಲ್ಲಿದ್ದೇನೆ ಎಂದರು.

ಜಮ್ಮು ಮತ್ತು ಕಾಶ್ಮೀರದ ಫಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕರ ದಾಳಿಯಲ್ಲಿ ನಮ್ಮ ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ಅವರು ಉಗ್ರರ ಗುಂಡೇಟಿಗೆ ಬಲಿಯಾದ ಸಂಗತಿ ಅತ್ಯಂತ ದುಃಖಕರವಾಗಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆಯ ಮೇರೆಗೆ ಪೆÇಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದು, ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದರು.

ಮೃತ ಮಂಜುನಾಥ್ ಅವರ ಪತ್ನಿ ಪಲ್ಲವಿ ಅವರೊಂದಿಗೆ ಈಗಾಗಲೇ ದೂರವಾಣಿ ಮೂಲಕ ಮಾತನಾಡಿ, ಅಲ್ಲಿನ ಗಂಭೀರ ಪರಿಸ್ಥಿತಿ ಕುರಿತು ಮಾಹಿತಿ ಪಡೆದು, ನೆರವಿನ ಭರವಸೆ ನೀಡಿ ಧೈರ್ಯ ಹೇಳಿದ್ದೇನೆ. ಇಂತಹ ಉಗ್ರ ದಾಳಿಯನ್ನು ತೀವ್ರವಾಗಿ ಖಂಡಿಸುತ್ತಾ, ಉಗ್ರ ದಾಳಿಗೆ ಪ್ರಾಣ ಕಳೆದುಕೊಂಡ ಮಂಜುನಾಥ್ ಅವರ ಆತ್ಮಕ್ಕೆ ಶಾಂತಿ ಕೋರಿ, ಅವರ ಕುಟುಂಬ ವರ್ಗದವರಿಗೆ ಹಾಗೂ ಸಂಬಂಧಿಕರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದರು.

RELATED ARTICLES
- Advertisment -
Google search engine

Most Popular

Recent Comments