Wednesday, January 22, 2025
Google search engine
Homeಇ-ಪತ್ರಿಕೆನಾಳೆ ರಾಷ್ಟ್ರಭಕ್ತ ಬಳಗದ ವತಿಯಿಂದ ಬೃಹತ್ ಜನಾಗ್ರಹ ಜಾಥಾ: ಕೆ.ಎಸ್.ಈಶ್ವರಪ್ಪ

ನಾಳೆ ರಾಷ್ಟ್ರಭಕ್ತ ಬಳಗದ ವತಿಯಿಂದ ಬೃಹತ್ ಜನಾಗ್ರಹ ಜಾಥಾ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ಬಡವರಿಗಾಗಿ ನಿರ್ಮಿಸಲು ಉದ್ದೇಶಿಸಿರುವ ಎಲ್ಲಾ 3000 ಮನೆಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸಬೇಕೆಂದು ಆಗ್ರಹಿಸಿ ಜು.18 ರಂದು ಬೆಳಿಗ್ಗೆ 10.00 ಗಂಟೆಗೆ ನಗರದ ರಾಮಣ್ಣಶೆಟ್ಟಿ ಪಾರ್ಕ್‍ನಿಂದ ಬೃಹತ್ ಜನಾಗ್ರಹ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಬುಧವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ಬಡವರಿಗಾಗಿ ನಿರ್ಮಿಸಿರುವ ಮನೆಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು. ಫಲಾನುಭವಿಗಳಿಗೆ ಆದಷ್ಟು ಬೇಗ ವಿತರಿಸಬೇಕು. 3000 ಮನೆಗಳಲ್ಲಿ ಕೇವಲ 288 ಮನೆಗಳನ್ನು ಮಾತ್ರ ಕೀ ನೀಡಲಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳ ಅಂತ್ಯಕ್ಕೆ ಉಳಿದ ಮನೆಗಳ ಕೀ ಕೊಡುತ್ತೇವೆ ಎಂದು ಸರ್ಕಾರ ಭರವಸೆ ನೀಡಿತ್ತು. ಆದರೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಈ ಬಗ್ಗೆ ವಸತಿ ಸಚಿವರನ್ನು ಕೂಡ ಭೇಟಿ ಮಾಡಿದ್ದೇವೆ, ಅವರು ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಆದರೆ ಇನ್ನೂ ಮನೆ ವಿತರಣೆಗೆ ಕ್ರಮ ಕೈಗೊಂಡಿಲ್ಲ ಎಂದರು.

ತಮಗೆ ಸೂರು ಸಿಗುತ್ತದೆ ಎಂದುಕೊಂಡು ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ಮನೆಗಳಿಗಾಗಿ ಸಾರ್ವಜನಿಕರು ಮುಗಂಡ ಹಣ ನೀಡಿ ಕಾಯುತ್ತಿದ್ದಾರೆ. ಆದರೆ ಇದುವರೆಗೂ ಮನೆಗಳ ನಿರ್ಮಾಣ ಮತ್ತು ವಿತರಣೆ ಸರಿಯಾಗಿ ಆಗಿದೆ ವಿಳಂಬವಾಗುತ್ತಿದೆ. ಮುಂಗಡ ಹಣ ನೀಡಿ ಕಾಯುತ್ತಿರುವ ಸಾರ್ವಜನಿಕರು ಸರ್ಕಾರದಿಂದ ನಮಗೆ ಮನೆ ಆಗಲ್ಲ, ನಮ್ಮ ಹಣ ನಮಗೆ ಕೊಡಿ ಎಂಬ ಹಂತಕ್ಕೆ ಬಂದಿದ್ದಾರೆ. ಹಾಗಾಗಿ ಸರ್ಕಾರದ ಗಮನಸೆಳೆಯಲು ಈ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.

ಸುಮಾರು ರೂ.7,76,667 ಗಳ ಮೌಲ್ಯದ ಮನೆ ಸಿಕ್ಕಂತಾಗುತ್ತದೆ. ಇದಕ್ಕೆ ಸುಮಾರು 3.80 ಯಷ್ಟು ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಸಬ್ಸಿಡಿ ಸಿಗುತ್ತದೆ. ಸಾಲ ಕೂಡ ಬ್ಯಾಂಕಿನಿಂದ ನೀಡಲಾಗುತ್ತದೆ. ಈಗಾಗಲೇ ಮನೆಗಾಗಿ ಫಲಾನುಭವಿಗಳು ಪರಿಶಿಷ್ಟರು 50 ಸಾವಿರ, ಇತರೆಯವರು 80 ಸಾವಿರ ಹಣವನ್ನು ಸಾಲಸೋಲ ಮಾಡಿ ಕಟ್ಟಿದ್ದಾರೆ. ಬಡ್ಡಿ ಕಟ್ಟಲಾಗದೆ, ಸಂಕಷ್ಟದಲ್ಲಿದ್ದಾರೆ. ಇತ್ತ ಮನೆಯೂ ಇಲ್ಲದೆ, ಬಡ್ಡಿ ಕಟ್ಟುವುದು ತಪ್ಪದೆ ಸೂರಿಗಾಗಿ ನಿಟ್ಟುಸಿರು ಬಿಡುತ್ತಿದ್ದಾರೆ. ವಸತಿ ಸಚಿವರು ತಕ್ಷಣವೇ ಇದನ್ನು ಗಮನಿಸಬೇಕು ಎಂದರು.

ಇದಲ್ಲದೆ ಜನಪ್ರತಿನಿಧಿಗಳಿಲ್ಲದೆ ಅಭಿವೃದ್ಧಿ ಕುಂಠಿತವಾಗಿದೆ. ಶಿವಮೊಗ್ಗ ಮಹಾನಗರಪಾಲಿಕೆಗೆ ತಕ್ಷಣವೇ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಬೇಕು. ವಾರ್ಡ್‍ಗಳ ಹೆಚ್ಚಳ ಇತ್ಯಾದಿಗಳ ಬಗ್ಗೆ ತಲೆಕೆಡಿಸಿಕೊಳ್ಳದೆ ಈಗಿರುವ ಸ್ಥಿತಿಯಲ್ಲಿಯೇ ಚುನಾವಣೆ ನಡೆಸಬೇಕು ಎಂದರು.

ಕಾಂಗ್ರೆಸ್ ಸರ್ಕಾರ ಪರಿಶಿಷ್ಟರನ್ನು ಕಡೆಗಾಣಿಸುತ್ತಿದೆ. ಸಿದ್ದರಾಮಯ್ಯ ನವರು ಅಹಿಂದ ನಾಯಕರಾಗಿ ಉಳಿದಿಲ್ಲ. ವಾಲ್ಮೀಕಿ ನಿಗಮದಲ್ಲಿ ಆದ ಭ್ರಷ್ಟಚಾರವೇ ಇದಕ್ಕೆ ಉದಾಹರಣೆಯಾಗಿದೆ. ಇದನ್ನು ಸರ್ಕಾರ ಎನ್ನಬೇಕೋ ಲೂಟಿಕೋರರ ಗುಂಪು ಎನ್ನಬೇಕೋ ಎಂದರು.

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸುಮಾರು ಎರಡು ವರ್ಷಗಳಿಂದ ಸ್ಕಾಲರ್‍ಶಿಪ್ ಕೊಟ್ಟಿಲ್ಲ. ಅವರ ಯಾವುದೇ ಕಷ್ಟಕ್ಕೆ ನೆರವಾಗಿಲ್ಲ, ಹಣ ಕೊಟ್ಟಿಲ್ಲ ಎಂದು ಸಚಿವ ಸಂತೋಷ್ ಲಾಡ್ ವಿರುದ್ಧ ದೂರಿದ ಅವರು, ಬಡವರ ಪರವಾಗಿ ಹೋರಾಟ ಶುರು ಮಾಡಿದ್ದೇವೆ. ಮನೆ ಸಿಗುವವರೆಗೂ ಹೋರಾಟ ನಿಲ್ಲಿಸಲ್ಲ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಪ್ರಮುಖರಾದ ಈ.ವಿಶ್ವಾಸ್, ಎಂ.ಶಂಕರ್, ಸುವರ್ಣ ಶಂಕರ್, ಶಂಕರ್, ಬಾಲು, ಗನ್ನಿ ಶಂಕರ್, ಕಾಚಿನಕಟ್ಟೆ ಸತ್ಯನಾರಾಯಣ, ಮಹಾಲಿಂಗಶಾಸ್ತ್ರಿ, ಮೋಹನ್, ನಾಗರಾಜ್, ವಾಗೀಶ್, ಶ್ರೀಕಾಂತ್, ಜಾಧವ್ ಮತ್ತಿತರರು ಇದ್ದರು.

RELATED ARTICLES
- Advertisment -
Google search engine

Most Popular

Recent Comments