ಶಿವಮೊಗ್ಗ : ಸರ್ಕಾರದ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿದರೆ ಡೆಂಗ್ಯೂ ಕಾಯಿಲೆಯನ್ನು ನಿಯಂತ್ರಿಸಬಹುದು ಎಂದು ಶಾಸಕ ಚನ್ನಬಸಪ್ಪ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶಿವಮೊಗ್ಗ ನಗರದ ನೇತಾಜಿ ಸರ್ಕಲ್ ಹತ್ತಿರ ಜೆಪಿ ನಗರ ವ್ಯಾಪ್ತಿಯಲ್ಲಿ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮ ಅಡಿಯಲ್ಲಿ ಪ್ರತಿ ಶುಕ್ರವಾರ ನಡೆಸುವ ಡ್ರೈ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡೆಂಗ್ಯೂ ನಿಯಂತ್ರಣದ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು ಮತ್ತು ಸಾರ್ವಜನಿಕರು ಸರ್ಕಾರಿ ಇಲಾಖೆ ಅಧಿಕಾರಿಗಳಿಗೆ ಸ್ಪಂದಿಸಬೇಕು. ಕಸವನ್ನು ಎಲ್ಲಿ ಬೇಕಾದಲ್ಲಿ ಹಾಕದೆ ಮಹಾನಗರಪಾಲಿಕೆ ಕಸದ ವಾಹನದಲ್ಲಿ ಹಾಕಬೇಕು ಹಾಗೂ ತಮ್ಮ ಬೀದಿಗಳಲ್ಲಿ ಮನೆಯ ಸುತ್ತಮುತ್ತ ಪ್ರದೇಶದಲ್ಲಿ ನೀರು ಸಂಗ್ರಹಣೆ ಆಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದ ಅವರು ಡೆಂಗ್ಯೂ ವಿರುದ್ಧ ಪ್ರತಿಯೊಬ್ಬರು ಹೋರಾಡೊಣ ಎಂದು ಕರೆ ನೀಡಿದರು.
ಈ ವೇಳೆ ಶಾಸಕರು ಅಧಿಕಾರಿಗಳೊಂದಿಗೆ ಹಲವಾರು ಮನೆಗಳಿಗೆ ಭೇಟಿ ನೀಡಿ ಲಾರ್ವ ಉತ್ಪತ್ತಿಯಾಗಿರುವ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕರಿಗೆ ಇದರ ಬಗ್ಗೆ ಮಾಹಿತಿ ನೀಡಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು ಹಾಗೂ ಲಾರ್ವ ಉತ್ಪತಿಯಾಗದಂತೆ ಗಮನ ನೀಡಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಿ.ಹೆಚ್‍ಓ ಡಾ.ನಟರಾಜ್, ರೋಗವಾಕ ಆಶ್ರೀತಾ ಅಧಿಕಾರಿ ಡಾ. ಗುಡದಪ್ಪ ಕಸಬಿ, ತಾಲೂಕು ಆರೋಗ್ಯ ಅಧಿಕಾರಿ ಡಾ. ಚಂದ್ರಶೇಖರ್, ಡಾ. ಮೋಹನ್, ಡಾ. ಭೀಮಪ್ಪ, ಮಹಾನಗರ ಪಾಲಿಕೆಯ ಹೆಲ್ತ್ ಇನ್ಸ್ಪೆಕ್ಟರ್ ವಿಕಾಸ್, ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗು ಆಶಾ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.