Thursday, January 23, 2025
Google search engine
Homeಇ-ಪತ್ರಿಕೆಸಬ್‌ ರಿಜಿಸ್ಟ್ರಾರ್‌ ಕಚೇರಿ ಸ್ಥಳಾಂತರಕ್ಕೆ ಶಾಸಕ ಚನ್ನಬಸಪ್ಪ ಸದನದಲ್ಲಿ ಮನವಿ

ಸಬ್‌ ರಿಜಿಸ್ಟ್ರಾರ್‌ ಕಚೇರಿ ಸ್ಥಳಾಂತರಕ್ಕೆ ಶಾಸಕ ಚನ್ನಬಸಪ್ಪ ಸದನದಲ್ಲಿ ಮನವಿ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಸೂಡಾ ಕಚೇರಿ ಕಟ್ಟಡದಲ್ಲಿರುವ ಸಬ್‌ ರಿಜಿಸ್ಟ್ರಾರ್‌ ಕಚೇರಿ ಯನ್ನು ಸಾರ್ವಜನಿಕರಿಗ ಅನುಕೂಲವಾಗುವಂತಹ ಜಾಗಕ್ಕೆ ಸ್ಥಳಾಂತರಿಸಬೇಕೆಂದು ಶಾಸಕ ಎಸ್.‌ ಎನ್.‌ ಚನ್ನಬಸಪ್ಪ ಅವರು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮನವಿ ಮಾಡಿದ್ದಾರೆ.

ಶಿವಮೊಗ್ಗ ಹಿರಿಯ ಉಪನೋಂದಣಿ ಕಚೇರಿ ಕಾರ್ಯನಿರ್ವಹಿಸುತ್ತಿರುವ ಕಟ್ಟಡದಲ್ಲಿ ಸಾರ್ವಜನಿಕರಿಗೆ ಪೂರಕ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲದಿರ ಕಾರಣ ಹಾಗೂ ಹಾಲಿ ಕಾರ್ಯನಿರ್ವಹಿಸುತ್ತಿರುವ ಕಚೇರಿ ಕಟ್ಟಡವು ಶಿವಮೊಗ್ಗ ಕೇಂದ್ರ ಬಸ್ ನಿಲ್ದಾಣದಿಂದ ಸಾಕಷ್ಟು ದೂರದಲ್ಲಿದ್ದು, ಸಾರ್ವಜನಿಕರು ಕಚೇರಿಗೆ ಭೇಟಿ ನೀಡಲು ತೊಂದರೆ ಆಗುತ್ತಿದ್ದು, ಅಷ್ಟೇ ಅಲ್ಲದೆ ಅಂಗವಿಕಲರು, ಅನಾರೋಗ್ಯ ಪೀಡಿತರು ಮತ್ತು ಹಿರಿಯ ನಾಗರಿಕರಿಗೆ ಸಾಕಷ್ಟು ತೊಂದರೆಯಾಗಿದೆ.ಆ   ಕಾರಣಕ್ಕೆ ಕಚೇರಿಯನ್ನು ಸ್ಥಳಾಂತರಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.

 ಎಪಿಎಂಸಿ ಆವರಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಶಿವಮೊಗ್ಗ ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಹತ್ತಿರವಿರುವ, ರಾಷ್ಟ್ರೀಯ ಹೆದ್ದಾರಿಗೆ ಮತ್ತು ಸಾಗರ ರಸ್ತೆಗೆ ಹೊಂದಿಕೊಂಡಿರುವ ವಾಣಿಜ್ಯ ಕಟ್ಟಡದ ಮೊದಲ ಮಹಡಿಯಲ್ಲಿ 5,000 ಚದರ ಅಡಿಗಳಷ್ಟು ಅಳತೆಯುಳ್ಳ  ಕಟ್ಟಡಕ್ಕೆ ಸ್ಥಳಾಂತರಿಸಿ, ನೂತನ ಕಟ್ಟಡದ ಕಾಮಗಾರಿಯನ್ನು ಶೀಘ್ರದಲ್ಲೇ ಪ್ರಾರಂಭಿಸಬೇಕಾಗಿ ಸದನದಲ್ಲಿ ಗಮನ ಸೆಳೆದಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments