ಶಿವಮೊಗ್ಗ: ಇಂದು ಡಿಸಿಸಿ ಬ್ಯಾಂಕ್ ನ ನಿರ್ದೇಶಕರ ಸ್ಥಾನಕ್ಕೆ ನಡೆದ ಮತದಾನದ ನಂತರ ಇದೀಗ ಫಲಿತಾಂಶವು ಪ್ರಕಟವಾಗಿದೆ.
ಕಾಂಗ್ರೆಸ್ ಬೆಂಬಲಿತ ಬಹುತೇಕ ನಾಯಕರು ಗೆಲುವು ಸಾಧಿಸಿದ್ದಾರೆ.
ಡಿಸಿಸಿ ಬ್ಯಾಂಕ್ ನ ಹೊಸನಗರದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂ.ಎಂ. ಪರಮೇಶ್ವರಪ್ಪ ಅವಿರೋಧ ಆಯ್ಕೆಯಾಗಿದ್ದರು. ಉಳಿದ 12 ಸ್ಥಾನಕ್ಕೆ ಚುನಾವಣೆ ನಡೆದಿತ್ತು.
ಗೆದ್ದ ಅಭ್ಯರ್ಥಿಗಳ ವಿವರ
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ಶಿವಮೊಗ್ಗ ತಾಲ್ಲೂಕು ಕ್ಷೇತ್ರದಿಂದ ಕೆ.ಪಿ ದುಗ್ಗಪ್ಪಗೌಡ
ಪ್ರಾ. ಕೃ. ಪ. ಸ. ಸಂಘ ನಿ. ಭದ್ರಾವತಿ ತಾಲ್ಲೂಕು ಕ್ಷೇತ್ರದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ ಹನುಮಂತಪ್ಪ
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ತೀರ್ಥಹಳ್ಳಿ ತಾ. ಕ್ಷೇತ್ರದಿಂದ ಬಸವಾನಿ ವಿಜಯದೇವ್
ಪ್ರಾ ಕೃ ಪ ಸ ಸಂಘ ನಿ ಸಾಗರ ತಾಲ್ಲೂಕು ಕ್ಷೇತ್ರದಿಂದ ಗೋಪಾಲಕೃಷ್ಣ ಬೇಳೂರು
ಪ್ರಾ ಕೃ ಪ ಸ ಸಂಘ ನಿ ಶಿಕಾರಿಪುರ ತಾಲ್ಲೂಕು ಕ್ಷೇತ್ರದಿಂದ ಎಸ್.ಪಿ ಚಂದ್ರಶೇಖರ ಗೌಡ
ಪ್ರಾ ಕೃ ಪ ಸ ಸಂಘ ನಿ ಸೊರಬ ತಾಲ್ಲೂಕು ಕ್ಷೇತ್ರದಿಂದ ಸಚಿವ ಮಧು ಅವರ ಆಪ್ತ ಕೆ.ಪಿ. ರುದ್ರಗೌಡ
ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಹಾಗೂ ಇತರೆ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳು ಶಿವಮೊಗ್ಗ ಉಪ ವಿಭಾಗದಿಂದ ಆರ್.ಎಂ. ಮಂಜುನಾಥಗೌಡ
ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಹಾಘೂ ಇತರೆ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳು ಸಾಗರ ಉಪ ವಿಭಾಗದಿಂದ ಜಿ.ಎನ್.ಸುಧೀರ್
ಪಟ್ಟಣ ಸಹಕಾರ ಬ್ಯಾಂಕುಗಳ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳು ಶಿವಮೊಗ್ಗ ಉಪವಿಭಾಗದಿಂದ ಎಸ್.ಕೆ. ಮರಿಯಪ್ಪ
ಬ್ಯಾಂಕಿನ ಕಾರ್ಯ ವ್ಯಾಪ್ತಿಯಲ್ಲಿ ಬರುವ ಇನ್ನಿತರ ಸಹಕಾರ ಸಂಘಗಳು ಶಿವಮೊಗ್ಗ ಉಪವಿಭಾಗದಿಂದ ರಾಷ್ಟ್ರಭಕ್ತ ಬಳಗದ ಮಹಾಲಿಂಗಯ್ಯ ಶಾಸ್ತ್ರಿ
ಪಟ್ಟಣ ಸಹಕಾರ ಬ್ಯಾಂಕುಗಳ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳು ಸಾಗರ ಉಪವಿಭಾಗದಿಂದ ಬಸವರಾಜ ಪಿ.ಎಲ್.
ಬ್ಯಾಂಕಿನ ಕಾರ್ಯ ವ್ಯಾಪ್ತಿಯಲ್ಲಿ ಬರುವ ಇನ್ನಿತರ ಸಹಕಾರ ಸಂಘಗಳು ಸಾಗರ ಉಪವಿಭಾಗದಿಂದ ಟಿ.ಶಿವಶಂಕರಪ್ಪ
13 ಕ್ಷೇತ್ರದಲ್ಲಿ 12 ಜನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದು, ಮತ್ತೆ ಆರ್ ಎಂ. ಮಂಜುನಾಥ್ ಗೌಡರ ಮೇಲುಗೈ ಸಾಧಿಸಿದ್ದಾರೆ. ಈ ಹಿನ್ನಲೆಯಲ್ಲಿ ಆರ್ ಎಂ ಎಂ ಮತ್ತೆ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.
12 ಮಂದಿ ನಿರ್ದೇಶಕರ ಅಯ್ಕೆಗೆ ಸಂಬಂಧಿಸಿದಂತೆ ಅಂತಿಮವಾಗಿ ಚುನಾವಣಾ ಕಣದಲ್ಲಿ ಒಟ್ಟು 27 ಮಂದಿ ಅಭ್ಯರ್ಥಿಗಳಿದ್ದರು. ಇಂದು ಬೆಳಗ್ಗೆ 9 ಗಂಟೆಯಿಂದ ಆರಂಭವಾಗಿದ್ದ ಚುನಾವಣೆಯು ಸಂಜೆ 4 ಗಂಟೆಯವರೆಗೆ ನಡೆದಿತ್ತು.
ಒಟ್ಟು 621 ಮತಗಳಲ್ಲಿ 5 ಮತಗಳು ತಿರಸ್ಕರಿಸಲ್ಪಟ್ಟಿವೆ ಎಂದು ಚುನಾವಣಾಧಿಕಾರಿ ಸತ್ಯನಾರಾಯಣ್ ತಿಳಿಸಿದ್ದಾರೆ.