Friday, January 17, 2025
Google search engine
Homeಇ-ಪತ್ರಿಕೆಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ​ವಾರಂಟ್ ಆದೇಶ

ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ​ವಾರಂಟ್ ಆದೇಶ

ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧನಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಿಐಡಿ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ. ಇದರಿಂದಾಗಿ ಯಾವುದೇ ಕ್ಷಣದಲ್ಲಿ ಅವರ ಬಂಧನ ಆಗಬಹುದು.

ಈ ಕುರಿತ ಅರ್ಜಿಯನ್ನು ನಗರದ 51ನೇ ಸಿವಿಲ್ ಮತ್ತು ಹೆಚ್ಚುವರಿ ಸೆಷನ್ಸ್ ಹಾಗೂ ಪೋಕ್ಸೊ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶ ಎನ್.ಎಂ. ರಮೇಶ್  ವಿಚಾರಣೆಗೆ ಕೈಗೆತ್ತಿಕೊಂಡಿದ್ದರು‌.

 “ಘಟನೆ ನಡೆದ ದಿನವೇ ಯಡಿಯೂರಪ್ಪ ಸಂತ್ರಸ್ತ ಬಾಲಕಿಯ ತಾಯಿಗೆ 2 ಲಕ್ಷ  ರೂ. ನೀಡಿದ್ದಾರೆ. ಬೇಡ ಎಂದರೂ ಅವರ ಪರ್ಸಿನಲ್ಲಿ ತುರುಕಿ ಕಳಿಸಿದ್ದಾರೆ. ಆ ತಾಯಿ ಮಾಡಿಕೊಂಡಿದ್ದ ವಿಡಿಯೊ ಡಿಲಿಟ್ ಮಾಡಿಸಿದ್ದಾರೆ. ಹೀಗೆ ಹಲವು ಹಂತಗಳಲ್ಲಿ ಸಾಕ್ಷ್ಯ ನಾಶ ಮಾಡುತ್ತಲೇ ಇದ್ದಾರೆ” ಎಂದು ಕೋರ್ಟ್‌ ಗಮನಕ್ಕೆ ತಂದರು.

“ಆರೋಪಿ ಕೇಳಿದಷ್ಟು ಸಮಯ ನೀಡಿದರೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶ ಮಾಡುವ ಸಾಧ್ಯತೆ ಇದೆ. ಆದ್ದರಿಂದ, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲು ಆದೇಶಿಸಬೇಕು” ಎಂದು ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ನಾಯಕ್ ಕೋರಿದರು.

ವಿಚಾರಣೆ ಅಲಿಸಿದ ನ್ಯಾಯಾಧೀಶ ಎನ್ ಎಂ ರಮೇಶ್ ಅವರು ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ​ವಾರಂಟ್ ಆದೇಶ ಪ್ರಕಟಿಸಿದರು.

ಸಂತ್ರಸ್ತೆಯ ಸಹೋದರ ಹೈಕೋರ್ಟ್​ಗೆ ರಿಟ್ ಅರ್ಜಿ

ಸಂತ್ರಸ್ತೆಯ ಸಹೋದರ ಯಡಿಯೂರಪ್ಪ ಅವರನ್ನು ಪೋಕ್ಸೊ ಪ್ರಕರಣದಲ್ಲಿ ಬಂಧಿಸಲು ನಿರ್ದೇಶನ ನೀಡಲು ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಕೇಸ್ ರದ್ದು ಕೋರಿ ಬಿಎಸ್​ವೈ ಹೈಕೋರ್ಟ್ ಮೊರೆ

ಸಿಐಡಿ ನೋಟಿಸ್ ನೀಡಿದ ಬೆನ್ನಲ್ಲೇ ಯಡಿಯೂರಪ್ಪ ಅವರು ಪ್ರಕರಣ ರದ್ದು ಕೋರಿ ರಾಜ್ಯ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments