ರಿಟರ್ನಿಂಗ್ ಆಫಿಸರ್ ಸತ್ಯನಾರಾಯಣ್ ಹೇಳಿಕೆ
ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ( ಡಿಸಿಸಿ ) ನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಯ 12 ಕ್ಷೇತ್ರಗಳಿಗೆ ಜೂನ್ 28 ರಂದು ಬೆಳಗ್ಗೆ 9.00 ರಿಂದ ಸಂಜೆ 4.00 ರ ವರೆಗೆ ಮತದಾನ ನೆಡೆಯಲಿದ್ದು, 2028-29 ನೇ ಸಾಲಿನ 05 ವರ್ಷಗಳ ಅವಧಿಯಲ್ಲಿನ ಚುನಾವಣೆಗೆ ಉದೇದುವಾರಿಕೆ ವಾಪಸ್ಸು ಪಡೆದ ನಂತರ ಅಂತಿಮವಾಗಿ ಒಟ್ಟು 27 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಶಿವಮೊಗ್ಗ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ದ ಕ್ಷೇತ್ರದಿಂದ ಕೆ.ಪಿ ದುಗ್ಗಪ್ಪಗೌಡ, ಶಿವನಂಜಪ್ಪ.ಜೆ ಕಣದಲ್ಲಿದ್ದರೆ, ಭದ್ರಾವತಿ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕ್ಷೇತ್ರದಿಂದ ಹೆಚ್.ಎಲ್. ಷಡಾಕ್ಷರಿ, ಹಾಗೂ ಸಿ.ಹನುಮಂತಪ್ಪ ಕಣದಲ್ಲಿದ್ದಾರೆ.
ತೀರ್ಥಹಳ್ಳಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ದ ಕ್ಷೇತ್ರದಿಂದ ಬಸವಾನಿ ವಿಜಯದೇವ್ ಹಾಗೂ ಕೆ.ಎಸ್.ಶಿವಕುಮಾರ್, ಸಾಗರ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕ್ಷೇತ್ರದಿಂದ ಶಾಸಕ ಗೋಪಾಲಕೃಷ್ಣ ಬೇಳೂರು ಹಾಗೂ ರತ್ನಾಕರ ಹೊನಗೋಡು ಕಣದಲ್ಲಿದ್ದಾರೆ.
ಶಿಕಾರಿಪುರ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕ್ಷೇತ್ರದಿಂದ ಅಗಡಿ ಅಶೋಕ ಹಾಗೂ ಎಸ್.ಪಿ ಚಂದ್ರಶೇಖರಗೌಡ ಇದ್ದರೆ ಸೊರಬ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕ್ಷೇತ್ರದಿಂದ ಕೆ.ಪಿ. ರುದ್ರಗೌಡ ಹಾಗೂ ಶಿವಮೂರ್ತಿಗೌಡ ಕಣದಲ್ಲಿದ್ದಾರೆ.
ಶಿವಮೊಗ್ಗ ಉಪ ವಿಭಾಗ ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಹಾಗೂ ಇತರೆ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳಿಂದ ಆರ್.ಎಂ. ಮಂಜುನಾಥಗೌಡ, ವಿರೂಪಾಕ್ಷಪ್ಪ ಕಣದಲ್ಲಿದ್ದಾರೆ .ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಹಾಗೂ ಇತರೆ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳು ಸಾಗರ ಉಪ ವಿಭಾಗದಿಂದ ಬಿ.ಡಿ ಭೂಕಾಂತ್, ಜಿ.ಎಸ್.ಸುಧೀರ್ ಇದ್ದರೆ, ಪಟ್ಟಣ ಸಹಕಾರ ಬ್ಯಾಂಕುಗಳ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳು ಶಿವಮೊಗ್ಗ ಉಪವಿಭಾಗದಿಂದ ಎಸ್.ಪಿ.ದಿನೇ ಶ್, ಮರಿಯಪ್ಪ ಕಣದಲ್ಲಿದ್ದಾರೆ.
ಪಟ್ಟಣ ಸಹಕಾರ ಬ್ಯಾಂಕುಗಳ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳು ಸಾಗರ ಉಪವಿಭಾಗದಿಂದ ಎಸ್.ಕೆ, ಬಸವರಾಜ್ ಡಿ.ಎಲ್, ರವೀಂದ್ರ ಹೆಚ್.ಎಸ್, ಬ್ಯಾಂಕಿನ ಕಾರ್ಯ ವ್ಯಾಪ್ತಿಯಲ್ಲಿ ಬರುವ ಇನ್ನಿತರ ಸಹಕಾರ ಸಂಘಗಳು ಶಿವಮೊಗ್ಗ ಉಪವಿಭಾಗದಿಂದ ಆನಂದ ಡಿ, ಕೆ.ಎಲ್.ಜಗದೀಶ್ವರ್, ಹೆಚ್.ಬಿ ದಿನೇಶ್, ವiಹಾಲಿಂಗಯ್ಯ ಶಾಸ್ತ್ರಿ ಎಸ್.ಎನ್, ಜೆ.ಪಿ ಯೋಗೇಶ್, ಟಿ. ಶಿವಶಂಕರಪ್ಪ, ಹರೀಶ್ ಎನ್.ಡಿ ಇವರುಗಳು ಅಂತಿಮ ಕಣದಲ್ಲಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ರಿಟರ್ನಿಂಗ್ ಅಧಿಕಾರಿ ಹಾಗೂ ಶಿವಮೊಗ್ಗ ಉಪವಿಭಾಗಾಧಿಕಾರಿಗಳಾದ ಸತ್ಯನಾರಾಯಣ ಬಿ.ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.