Wednesday, January 22, 2025
Google search engine
Homeಇ-ಪತ್ರಿಕೆನಗರದಲ್ಲಿ ಹಂದಿ, ನಾಯಿಗಳ ಕಾಟ: ಸ್ವಚ್ಚತೆಯಿಲ್ಲದೆ ಡೆಂಗ್ಯೂ ಜ್ವರ; ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್

ನಗರದಲ್ಲಿ ಹಂದಿ, ನಾಯಿಗಳ ಕಾಟ: ಸ್ವಚ್ಚತೆಯಿಲ್ಲದೆ ಡೆಂಗ್ಯೂ ಜ್ವರ; ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್

ಶಿವಮೊಗ್ಗ: ಪಾಲಿಕೆ ನಿದ್ರಿಸುತ್ತಿದೆ, ಜನರ ಹಿತ ಮರೆತಿದೆ, ಅಧಿಕಾರಿಗಳು ಕರ್ತವ್ಯ ಶೂನ್ಯರಾಗಿದ್ದಾರೆ ಎಂದು ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಾಲಿಕೆ ಈಗ ಅಧಿಕಾರಿಗಳ ಕೈಯಲ್ಲಿದೆ. ಆದರೆ ಈ ಅಧಿಕಾರಿಗಳು ನಗರದ ಅಭಿವೃದ್ಧಿಯನ್ನೇ ಮರೆತಿದ್ದಾರೆ. ಇಡೀ ನಗರದಲ್ಲಿ ಸ್ವಚ್ಛತೆಯಿಲ್ಲದೆ, ಕಸದ ರಾಶಿ ಎಲ್ಲಡೆ ಕಂಡು ಬರುತ್ತಿದೆ. ಅವ್ಯವಸ್ಥೆಯ ಆಗರವಾಗಿದೆ. ಸೊಳ್ಳೆ ನಿಯಂತ್ರಣ ಇಲ್ಲವೇ ಇಲ್ಲ. ಪರಿಣಾಮ ನಗರದಲ್ಲೆಡೆ ಡೆಂಗ್ಯೂ ಜ್ವರ ಸೇರಿದಂತೆ ಇತರ ಸಾಮಾನ್ಯ ಜ್ವರಗಳು ಕಾಣಿಸಿಕೊಳ್ಳ ತೊಡಗಿವೆ. ಸಣ್ಣ ಸಣ್ಣ ಗಲ್ಲಿಯ ಆಸ್ಪತ್ರೆಗಳಲ್ಲೂ ಸಾರ್ವಜನಿಕರು ಚಿಕಿತ್ಸೆಗಾಗಿ ಕಾಯುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಜೊತೆಗೆ ಹಂದಿ, ನಾಯಿಗಳ ಕಾಟ ಬೇರೆ, ಒಟ್ಟಾರೆ ಇಡೀ ನಗರದ ಚಿತ್ರಣವೇ ಬದಲಾಗಿದೆ ಎಂದರು.

ಕುಡಿಯುವ ನೀರಿನ ವ್ಯವಸ್ಥೆ ಸರಿಯಿಲ್ಲ, ೨೪*೭ ನೀರಿನ ಯೋಜನೆ ನೆನೆಗುದಿಗೆ ಬಿದ್ದಿದೆ. ಸ್ವಲ್ಪ ಮಳೆ ಬಂದರು ಸಾಕು, ತಗ್ಗಿನ ಪ್ರದೇಶಗಳಲ್ಲಿ ನೀರು ನುಗ್ಗುತ್ತದೆ. ರಾಜಕಾಲುವೆ ಸೇರಿದಂತೆ ಚರಂಡಿ, ಹೂಳು ತುಂಬಿದೆ. ಪರಿಣಾಮ ಕೊಳಚೆ ನೀರು, ರಸ್ತೆಗಳಲ್ಲಿ ಹರಿಯುತ್ತಿದೆ. ಕೆಲವು ಕಡೆ ಕುಡಿಯುವ ನೀರಿನ ನಳಗಳಿಗೂ ಹೋಗುತ್ತಿದೆ ಎಂದು ದೂರಿದರು.

ಅಧಿಕಾರಿಗಳು ಸೋಮಾರಿಗಳಾಗಿದ್ದಾರೆ. ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಈ ಎಲ್ಲದರ ನಡುವೆ ಪಾಲಿಕೆಯ ಚುನಾವಣೆಯನ್ನು ಸರ್ಕಾರವೇ ಶೀಘ್ರವೇ ಘೋಷಿಸಬೇಕಾಗಿದೆ. ಆದಷ್ಟು ಬೇಗ ನಗರದ ಸುವ್ಯವಸ್ಥೆ ಕಾಪಾಡಲು ಅಭಿವೃದ್ಧಿಗೆ ಆದ್ಯತೆ ನೀಡುವ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ಅವಶ್ಯಕತೆ ಇದೆ. ಆಗಾಗಿ ಚುನಾವಣೆ ಬೇಗ ಘೋಷಣೆಯಾಗಬೇಕು ಎಂದರು.

ಇತ್ತೀಚಿಗೆ ಬಟ್ಟೆ ಮಾರ್ಕೆಟ್‌ಗೆ ಬೆಂಕಿ ಬಿದ್ದಿದ್ದು, ಅತ್ಯಂತ ದುರಾದೃಷ್ಠಕರ. ಸಾರ್ವಜನಿಕರ ಮತ್ತು ಅಗ್ನಿಶಾಮಕದಳದವರ ಪ್ರಯತ್ನದಿಂದ ಹೆಚ್ಚಿನ ಅನಾಹುತ ತಪ್ಪಿದೆ. ಅಗ್ನಿಶಾಮಕದಳದವರಿಗೆ ನಮ್ಮ ಅಭಿನಂದನೆಗಳನ್ನು ತಿಳಿಸುತ್ತೇವೆ. ಮತ್ತು ಇಲ್ಲಿನ ವ್ಯಾಪಾರಸ್ಥರಿಗೆ ತುಂಬಾ ನಷ್ಟವಾಗಿದ್ದು, ಜಿಲ್ಲಾಡಳಿತದ ವತಿಯಿಂದ ಬೇಗನೆ ಪರಿಹಾರ ನೀಡಬೇಕು ಎಂದರು.

ಹಾಗೆಯೇ ಈ ಮಾರ್ಕೆಟ್‌ನ ಕಟ್ಟಡ ತುಂಬಾ ಹಳೆಯದು, ಈಗಲಾದರೂ ಮಹಾನಗರ ಪಾಲಿಕೆ ಹೆಚ್ಚೆತ್ತುಕೊಳ್ಳಬೇಕು. ಇಲ್ಲಿ ಬಹುಮಹಡಿ ಕಟ್ಟಡವನ್ನು ಕಟ್ಟಿ ಇಲ್ಲಿನ ವ್ಯಾಪಾರಸ್ಥರಿಗೆ ನೀಡಬೇಕು. ಇದರಿಂದ ಪಾಲಿಕೆಯ ಆದಾಯ ಕೂಡ ಹೆಚ್ಚುತ್ತದೆ. ಶಾಪಿಂಗ್ ಕಾಂಪ್ಲೆಕ್ಸ್ ಆದರೆ ಎಲ್ಲರಿಗೂ ಅನುಕೂಲವಾಗುತ್ತದೆ. ಮತ್ತು ಮಹಾನಗರ ಪಾಲಿಕೆ ವತಿಯಿಂದ ಈಗಾಗಲೇ ಎರಡು ಕಡೆ ನಿರ್ಮಾಣವಾಗಿರುವ ಕಟ್ಟಡಗಳನ್ನು ಬೇಗನೆ ಲೋಕಾರ್ಪಣೆಗೊಳಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ನಗರಾಧ್ಯಕ್ಷ ದೀಪಕ್ ಸಿಂಗ್, ಪ್ರಮುಖರಾದ ಗಂಧದ ಮನೆ ನರಸಿಂಹ, ರಾಮಕೃಷ್ಣ, ತ್ಯಾಗರಾಜ್, ಬೊಮ್ಮನಕಟ್ಟೆ ಮಂಜು, ಸಂಗಯ್ಯ, ಸಿದ್ದಪ್ಪ, ಮಧುಸೂದನ್, ಕಶ್ಯಪ್, ಲೋಹಿತ್, ನಿಯಾಲ್, ಸುನೀಲ್, ಮಾಧವಮೂರ್ತಿ ಮುಂತಾದವರಿದ್ದರು.

RELATED ARTICLES
- Advertisment -
Google search engine

Most Popular

Recent Comments