Friday, January 17, 2025
Google search engine
Homeಅಂಕಣಗಳುಲೇಖನಗಳುಸರ್ಕಾರಿ ಆಸ್ಪತ್ರೆಗಳಲ್ಲಿ ಖಾಸಗಿ ಔಷಧಕ್ಕೆ ಆಸ್ಪದವಿಲ್ಲ : ರಮೇಶ್ ಕುಮಾರ್ ಎಚ್ಚರಿಕೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಸಗಿ ಔಷಧಕ್ಕೆ ಆಸ್ಪದವಿಲ್ಲ : ರಮೇಶ್ ಕುಮಾರ್ ಎಚ್ಚರಿಕೆ

ಶಿವಮೊಗ್ಗ : ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರಗಿನಿಂದ ಔಷಧಿ ತರಿಸಲು ಚೀಟಿ ನೀಡುವ ಕೆಟ್ಟ ಪದ್ಧತಿಗೆ ಕಡಿವಾಣ ಹಾಕಲಾಗಿದ್ದು, ಔಷಧಿಗಾಗಿ ಚೀಟಿ ಬರೆದು ನೀಡುವ ವೈದ್ಯರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಎಚ್ಚರಿಕೆ ನೀಡಿದರು.
ಇಂದು ಹೊಸನಗರದಲ್ಲಿ ೭ ಕೋಟಿ ರೂ. ವೆಚ್ಚದಲ್ಲಿ ೫೦ ಹಾಸಿಗೆಯಿಂದ ೧೦೦ ಹಾಸಿಗೆಗೆ ಮೇಲ್ದರ್ಜೆಗೇರಿಸಿದ ಸಾರ್ವಜನಿಕ ಆಸ್ಪತ್ರೆ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಆಸ್ಪತ್ರೆಗೆಳಲ್ಲಿ ಮುಂದಿನ ೧೫ದಿನಗಳಲ್ಲಿ ಅಗತ್ಯವಾಗುವ ಔಷಧಿಗಳ ಬಗ್ಗೆ ಒಂದು ತಿಂಗಳು ಮುಂಚಿತವಾಗಿಯೇ ಪ್ರಸ್ತಾವನೆ ಸಲ್ಲಿಸಲು ಎಲ್ಲಾ ಜಿಲ್ಲಾ ಔಷಧಿ ಘಟಕಗಳಿಗೆ ಸೂಚನೆ ನೀಡಲಾಗಿದೆ. ಅಗತ್ಯ ಔಷಧಿಗಳನ್ನು ೪೮ ಗಂಟೆಗಳ ಒಳಗಾಗಿ ಪೂರೈಕೆ ಮಾಡಲಾಗುತ್ತಿದೆ ಎಂದರು.
ಕೆಪಿಎಂಇ ತಿದ್ದುಪಡಿ ಕಾಯ್ದೆ ಚುನಾವಣೆ ಒಳಗಾಗಿ ಜಾರಿ: ರಾಜ್ಯದಲ್ಲಿ ಖಾಸಗಿ ವೈದ್ಯ ಕೀಯ ಸೇವೆಯನ್ನು ನಿಯಂತ್ರಿ ಸುವ ಕೆಪಿಎಂಇ ತಿದ್ದುಪಡಿ ಕಾಯ್ದೆ ಅನುಷ್ಟಾನ ಪ್ರಕ್ರಿಯೆ ಫೆ.೧೦ ಒಳಗಾಗಿ ಪೂರ್ಣ ಗೊಂಡು ಚುನಾವಣೆ ಒಳಗಾಗಿ ಜಾರಿಗೆ ಬರಲಿದೆ ಎಂದ ಅವರು, ಇನ್ನು ಮುಂದೆ ನೇರವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಸರ್ಕಾರದಿಂದ ಶುಲ್ಕ ಮರು ಪಾವತಿಸುವ ವ್ಯವಸ್ಥೆಯನ್ನು ಕೊನೆಗೊಳಿಸಲಾ ಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿಲ್ಲದ ಚಿಕಿತ್ಸೆಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಪಡೆದರೆ ಮಾತ್ರ ಶುಲ್ಕವನ್ನು ಮರು ಪಾವತಿ ಮಾಡಲಾಗುವುದು ಎಂದರು.
ಡಯಾಲಿಸಿಸ್ ಘಟಕಗಳ ಆರಂಭ: ಫೆಬ್ರವರಿ ಅಂತ್ಯದ ಒಳ ಗಾಗಿ ಉಚಿತ ಡಯಾಲಿಸಿಸ್ ಘಟಕಗಳನ್ನು ಎಲ್ಲಾ ತಾಲೂಕು ಗಳಲ್ಲಿ ಆರಂಭಿಸಲಾಗುವುದು. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಡಯಾಲಿಸಿಸ್ ಘಟಕಗಳ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ ಎಂದರು.
ರಾಜ್ಯದಲ್ಲಿ ೫೪ ವೈದ್ಯಕೀಯ ಕಾಲೇಜು ಗಳಿದ್ದು, ದೇಶದಲ್ಲೆ ಅತಿ ಹೆಚ್ಚಿನ ಸಂಖ್ಯೆಯ ಲ್ಲಿದೆ. ವರ್ಷಕ್ಕೆ ಕನಿಷ್ಟ ಸುಮಾರು ೪ಸಾವಿರ ವೈದ್ಯಕೀಯ ವಿದ್ಯಾರ್ಥಿಗಳು ಕಲಿತು ಹೊರ ಬರುತ್ತಿದ್ದಾರೆ. ಆದರೆ ರಾಜ್ಯದಲ್ಲಿರುವ ೨೩೫೩ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಹುದ್ದೆಗಳನ್ನು ತುಂಬಲು ಸಾಧ್ಯವಾಗುತ್ತಿಲ್ಲ. ಸರ್ಕಾರಿ ಸವಲತ್ತುಗಳನ್ನು ಬಳಸಿಕೊಂಡು ವೈದ್ಯಕೀಯ ಶಿಕ್ಷಣ ಪೂರೈಸುವ ವೈದ್ಯರು ಗ್ರಾಮೀಣ ಸೇವೆಗೆ ಹಿಂದೇಟು ಹಾಕುತ್ತಿರು ವುದು ವಿಷಾದಕರ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ವೈದ್ಯರ ಕೊರತೆಯನ್ನು ನೀಗಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾ ಗಿದೆ. ವೈದ್ಯರ ವೇತನವನ್ನು ದುಪ್ಪಟ್ಟುಗೊಳಿಸ ಲಾಗಿದೆ. ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳಲ್ಲಿ ವೈದ್ಯರ ಲಭ್ಯತೆಯನ್ನು ಖಾತ್ರಿಪಡಿಸಲು ಗ್ರಾಮೀಣ ಸೇವೆ ಕಡ್ಡಾಯ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಆರೋಗ್ಯ ಇಲಾಖೆಗೆ ಹೊಸ ಕಾಯಕಲ್ಪ ಮಾಡಲಾಗಿದ್ದು, ವೈದ್ಯಕೀಯ ಸೇವೆ ಪ್ರತಿಯೊಬ್ಬ ರಿಗೂ ಲಭಿಸುವಂತೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿ.ಪಂ. ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಜಿ.ಪಂ. ಸದಸ್ಯೆ ಶ್ವೇತಾ ಬಂಡಿ, ಕಲಗೋಡು ರತ್ನಾಕರ್, ಭಾರತಿ ಪ್ರಭಾಕರ್, ತಾ.ಪಂ.ಅಧ್ಯಕ್ಷ ವಾಸಪ್ಪ ಗೌಡ್ರು, ಹಾಲುಗದ್ದೆ ಉಮೇಶ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments