ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಮರಣೋತ್ತರ ಪರೀಕ್ಷಾ ವರದಿ ಬಹಿರಂಗಗೊಂಡಿದೆ.
ಮಾರಾಣಾಂತಿಕ ಹಲ್ಲೆಯ ಕಾರಣ, ರೇಣುಕಾಸ್ವಾಮಿಯ ಸಾವು ಸಂಭವಿಸಿದೆ ಎಂದು ಮರಣೋತ್ತರ ಪರೀಕ್ಷಾ ವರದಿ ಹೇಳಿದೆ. ಪೊಲೀಸರು ಆರೋಪಿಗಳನ್ನ ಹಾಜರುಪಡಿಸುವಾಗ ನ್ಯಾಯಾಲಯಕ್ಕೆ ಸಲ್ಲಿಸಲು ಸಿದ್ಧಪಡಿಸಿರುವ ರಿಮ್ಯಾಂಡ್ ಅರ್ಜಿಯ ಪ್ರತಿ ಮಾಧ್ಯಮವೊಂದಕ್ಕೆ ಲಭ್ಯವಾಗಿದೆ.
ವರದಿಯಲ್ಲಿ ಶಾಕ್ ಹಾಗೂ ಬಲವಾದ ಹೊಡೆತಗಳ ಕಾರಣದಿಂದ ರಕ್ತಸ್ರಾವವಾಗಿ ಸಾವು ಸಂಭವಿಸಿದೆ ಎಂದು ಹೇಳಲಾಗಿದೆ.
ಈ ಪ್ರಕರಣದ ಸಂಬಂಧ ಇಲ್ಲಿಯವರೆಗೆ ೧೯ ಆರೋಪಿಗಳನ್ನು ಬಂಧಿಸಲಾಗಿದೆ. ನಾಳೆ ಅಂದರೆ ಜೂನ್ 20 ಕ್ಕೆ ದರ್ಶನ್ ಹಾಗೂ ಇತರೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು, ನಾಳೆ ನ್ಯಾಯಾಲಯದ ಆದೇಶದಂತೆ ದರ್ಶನ್ ಹಾಗೂ ಇತರ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಳಪಡಬೇಕಾಗಬಹುದು.