ಶಿಕಾರಿಪುರ: 23ರಲ್ಲಿ ಶಿಕಾರಿಪುರ ತಾಲ್ಲೂಕಿನ ವಾಸಿ 23 ವರ್ಷದ ಯುವಕನು 15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಕಲಂ 376(2)(f), 376(2)(n)) ಐಪಿಸಿ ಕಾಯ್ದೆ ಮತ್ತು ಕಲಂ 6 ಪೋಕ್ಸೋ ಕಾಯ್ದೆ ಹಾಗೂ ಎಸ್.ಸಿ ಮತ್ತು ಎಸ್.ಟಿ ಪಿಎ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿದ್ದು, ವಿಚಾರಣೆ ನಡೆದು ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.
ಪ್ರಕರಣದ ಆಗಿನ ತನಿಖಾಧಿಕಾರಿಯಾದ ಪೊಲೀಸ್ ಉಪಾಧೀಕ್ಷಕ ಶಿವಾನಂದ ಎಸ್ ಮದರಖಂಡಿರವರು ಪ್ರಕರಣದ ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಆರೋಪಿನ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.
ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಎಸ್. ಹರಿಪ್ರಸಾದ್, ಸರ್ಕಾರಿ ಅಭಿಯೋಜಕರವರು, ವಾದ ಮಂಡಿಸಿದ್ದು, ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-1 ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತನ ವಿರುದ್ಧ ಆರೋಪ ದೃಡ ಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧೀಶೆ ಲತಾ ಪ್ರಕರಣದ ಆರೋಪಿ ಶಿಕಾರಿಪುರ ತಾಲ್ಲೂಕಿನ ವಾಸಿ 23 ವರ್ಷದ ಯುವಕನಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ, ರೂ 50,000/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ 4 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿದ್ದು, ನೊಂದ ಬಾಲಕಿಗೆ ಪರಿಹಾರವಾಗಿ ದಂಡದ ಮೊತ್ತದಲ್ಲಿ 45,000/- ಮತ್ತು ಸರ್ಕಾರದ ವತಿಯಿಂದ ರೂ 7,00,000/- ನೀಡುವಂತೆ ಆದೇಶಿಸಿರುತ್ತಾರೆ.