ಬೆಂಗಳೂರು: ಕಳೆದ ತಿಂಗಳು ನಡೆದಿದ್ದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ-2 ಫಲಿತಾಂಶವನ್ನು ಪ್ರಕಟಿಸಲಾಗಿದೆ.
ಶೇ. 31.02ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಒಟ್ಟು 223293 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 69275 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಮಂಡಲಿಯ ಅಧ್ಯಕ್ಷೆ ಎನ್.ಮಂಜುಳಾ ತಿಳಿಸಿದ್ದಾರೆ.
ಪ್ರಥಮ ಭಾಷೆಯಲ್ಲಿ 223192 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 118730 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
2ನೇ ಭಾಷೆಯಲ್ಲಿ222419 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 106148ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
3ನೇ ಭಾಷೆಯಲ್ಲಿ2222330 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 113470 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಪ್ರಥಮ ವಿಷಯದಲ್ಲಿ 223218 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 96951ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
2ನೇ ವಿಷಯದಲ್ಲಿ223218 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 84730 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
3ನೇ ವಿಷಯದಲ್ಲಿ223293 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 113776ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.