ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜಾಮೀನು ಮಂಜೂರಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಒಂದು ಪ್ರಕರಣದಲ್ಲಿ ಮಾತ್ರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜೂನ್ 23 ರಂದು ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿತ್ತು.
ಹಾಸನದ ಹೊಳೆನರಸಿಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೂರು ದಾಖಲಾಗಿ ಬಂಧಿಸಲ್ಪಟ್ಟಿದ್ದರು.
ಆರೋಪಿ ಸೂರಜ್ ರೇವಣ್ಣ ಯಾವುದೇ ರೀತಿಯಲ್ಲೂ ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು. ತನಿಖಾಧಿಕಾರಿ ಮುಂದೆ ಪ್ರತಿ ತಿಂಗಳ ಎರಡನೇ ಭಾನುವಾರ ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿದೆ.