ಕೊಪ್ಪಳ: ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ಸಂಭವಿಸಿದ್ದು, ಕುಡಿದ ಮತ್ತಿನಲ್ಲಿ ರೈಲ್ವೇ ಟ್ರ್ಯಾಕ್ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗಂಗಾವತಿ ನಗರದ ಹೊರವಲಯದಲ್ಲಿ ಈ ದುರ್ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಸಿಂಧೂನೂರಿಗೆ ತೆರಳುತ್ತಿದ್ದ ರೈಲು ಹರಿದು ಯುವಕರು ಸಾವನ್ನಪ್ಪಿದ್ದಾರೆ. ಮೃತರನ್ನು ಮೌನೇಶ್ (23), ಸುನೀಲ್ (23) , ವೆಂಕಟ ಭೀಮಾನಾಯ್ಕ್ (20) ಎಂದು ಗುರುತಿಸಲಾಗಿದೆ.
ಮೂವರು ಯುವಕರು ಕಳೆದ ರಾತ್ರಿ ರೈಲ್ವೆ ಹಳಿ ಬಳಿಯೇ ಪಾರ್ಟಿ ಮಾಡಿ, ನಂತರ ಹಳಿ ಮೇಲೇ ಮಲಗಿದ್ದರು ಅಂತ ಹೇಳಲಾಗುತ್ತಿದೆ. ಈ ಬಗ್ಗೆ ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.