Thursday, January 16, 2025
Google search engine
Homeಇ-ಪತ್ರಿಕೆಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ: ಬಿಜೆಪಿ ನಾಯಕರ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ: ಬಿಜೆಪಿ ನಾಯಕರ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಒಂದು ರೂಪಾಯಿಯನ್ನು ಕೊಟ್ಟಿಲ್ಲ.  ಆದರೂ ಏನೂ ಅನ್ಯಾಯವಾಗಿಲ್ಲ ಎಂದು ಜನರಿಗೆ ತಪ್ಪು ಮಾಹಿತಿ, ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮಂ
ಕಾವೇರಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ನಂತರ  ಕಾರ್ಯಕ್ರಮವನ್ನು  ಉದ್ದೇಶಿಸಿ ಮಾತನಾಡಿದ ಅವರು,
10 ದಿನ ನಡೆಯುವ ವಿಧಾನಮಂಡಲದ ಅಧಿವೇಶನದಲ್ಲಿ 8 ದಿನ ಕಾಲಹರಣ ಮಾಡಿದರು. ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದಂತೆ ಪ್ರವಾಹ, ಕೃಷಿ, ನೀರಾವರಿ, ಮೇಕೆದಾಟು, ಮಹದಾಯಿ, ಕೃಷ್ಣಾ, ರಾಜ್ಯಕ್ಕೆ ಬರಬೇಕಾದ ಅನುದಾನಗಳ ಬಗ್ಗೆ ಒಂದು ದಿನವೂ ಮಾತನಾಡಲಿಲ್ಲ. ರಾಜ್ಯಕ್ಕೆ ಸಂಬಂಧಧವಿಲ್ಲದ ಸುಳ್ಳು ಹೇಳಿಕೊಂಡು  ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದು ದೂರಿದರು.

 ಈ ರಾಜ್ಯದ ಜನ ರಾಜಕೀಯವಾಗಿ ಪ್ರಬುದ್ಧರಾಗಿದ್ದು, ಯಾರು ಸುಳ್ಳು ಹೇಳುತ್ತಿದ್ದಾರೆ ಎಂದು ಅರ್ಥ ಮಾಡಿಕೊಳ್ಳುವ ಶಕ್ತಿ ಅವರಿಗಿದೆ. ಕಾಂಗ್ರೆಸ್ ಸರ್ಕಾರ ಜನರ ಆಶೀರ್ವಾದಿಂದ 136 ಸ್ಥಾನಗಳನ್ನು ಪಡೆದು ಅಧಿಕಾರಕ್ಕೆ ಬಂದಿದೆ. ನಮಗೆ ಜನ ಆಶೀರ್ವಾದ ಮಾಡಿದ್ದಾರೆ. ನಮ್ಮ ಸರ್ಕಾರವನ್ನು ದುರ್ಬಲಗೊಳಿಸಲು ಕ್ಷುಲ್ಲಕ ವಿಚಾರಗಳನ್ನು ಇಟ್ಟುಕೊಂಡು, ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ದೇಶದ ಅನೇಕ ರಾಜ್ಯಗಳಲ್ಲಿ ಮಾಡಿದಂತೆ ಇಲ್ಲಿಯೂ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಜನ ಇದನ್ನು ಅರ್ಥ ಮಾಡಿಕೊಳ್ಳಬೇಕು. ನಮ್ಮ ಜನರು ಸುಳ್ಳಿಗೆ ಮಾರು ಹೋಗುವುದಿಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎನ್ನುತ್ತಾರೆ. ಯಾವ ಅಭಿವೃದ್ಧಿ ಕೆಲಸ ನಿಂತು ಹೋಗಿದೆ? ಎಂದು ಪ್ರಶ್ನಿಸಿ ಮುಖ್ಯಮಂತ್ರಿಗಳು ಗ್ಯಾರಂಟಿಗಳನ್ನು ಜಾರಿ ಮಾಡಿ 4.50 ಕೋಟಿ ಜನರಿಗೆ 4-5 ಸಾವಿರ ತಿಂಗಳಿಗೆ ದೊರಕುವ ರೀತಿ ಮಾಡಲಾಗಿದೆ. ಇದರಿಂದ ಬಡವರಿಗೆ ಅನುಕೂಲವಾಗುವುದಿಲ್ಲವೇ? ಬಿಜೆಪಿ/ ಜೆಡಿಎಸ್ ನವರಿಗೆ ತಾಕತ್ತಿದ್ದರೆ ಬಡವರ ವಿರುದ್ಧವಾಗಿ ಹೇಳಿಕೆಯನ್ನು ನೀಡಲಿ. ಇವರಿಗೆ  ಧಮ್ ಇಲ್ಲ. ಗ್ಯಾರಂಟಿಗಳನ್ನು ನಿಲ್ಲಿಸಲಿ ಎಂದು ಹೇಳಲಿ ನೋಡೋಣ. ಹಾಗೆಂದು ಹೇಳಿದರೆ ಬಡವರು ವಿರೋಧಿಸುತ್ತಾರೆಂಬ ಭಯ. ಈ ವರ್ಷದ ಬಜೆಟ್ 3,71,000 ಕೋಟಿ ರೂ.ಗಳು. ಯಾವ ಇಲಾಖೆಗೆ ಅನುದಾನ ಕೊಟ್ಟಿಲ್ಲ ನಾವು? ಎಂದು ಪ್ರಶ್ನಿಸಿದರು. ನಾವು ದಲಿತರಿಗೆ ಮಾಡಿರುವಷ್ಟು ಕೆಲಸವನ್ನು ಬೇರೆ ಯಾವ ಸರ್ಕಾರವೂ ಮಾಡಿಲ್ಲ. ಬಿಜೆಪಿಯವರು ರೈತ ವಿರೋಧಿಗಳು. ಅವರು ನಮಗೆ ಪಾಠ ಹೇಳಿಕೊಡುವ ಕೆಲಸ ಮಾಡುತ್ತಾರೆ ಎಂದರು.

RELATED ARTICLES
- Advertisment -
Google search engine

Most Popular

Recent Comments