ಉಡುಪಿ: ಮುಂಗಾರು ಮಳೆ ಉಡುಪಿ ನಗರದ ಹಲವೆಡೆ ನೆರೆ ಸೃಷ್ಟಿಸಿದೆ. ಇಂದ್ರಾಣಿ ತೀರ್ಥ ಉಕ್ಕಿ ಹರಿದ ಪರಿಣಾಮ ನದಿ ಪಾತ್ರದ ಸ್ಥಳಗಳೆಲ್ಲ ಜಲಾವೃತಗೊಂಡಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಕರಂಬಳ್ಳಿ ವೆಂಕಟರಮಣ ಲೇಔಟ್ ನ ಹಲವು ಮನೆಗಳು ಜಲಾವೃತಗೊಂಡಿರುವ ಬಗ್ಗೆ ವರದಿಯಾಗಿದೆ.
ಸುಮಾರು ಮೂರು ಗಂಟೆ ಸುರಿದ ರಣ ಮಳೆಗೆ ಉಡುಪಿ ನಗರ ತತ್ತರವಾಗಿದೆ. ಮಣಿಪಾಲ ಪರ್ಕಳ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದರಿಂದ ಭಾರೀ ಪ್ರಮಾಣದಲ್ಲಿ ಉಡುಪಿಯತ್ತ ನೀರು ಹರಿದು ಬಂದಿದೆ. ಗದ್ದೆ, ನಗರ ಪ್ರದೇಶ, ಲೇಔಟ್ ಒಳಗಡೆ ಕೆಸರು ನೀರು ನುಗ್ಗಿದೆ.
ಗುಂಡಿಬೈಲು, ಪಾಡಿಗಾರು, ಮಠದಬೆಟ್ಟು, ಕರಂಬಳ್ಳಿ, ಕಲ್ಸಂಕ ಬೈಲಕೆರೆ, ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶ, ಮೂಡನಿಡಂಬೂರು, ನಿಟ್ಟೂರು, ಮಲ್ಪೆ, ಮಣಿಪಾಲ ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, 150ಕ್ಕೂ ಅಧಿಕ ಮನೆಗಳು ಜಲ ದಿಗ್ಭಂಧನಕ್ಕೆ ಒಳಗಾಗಿವೆ. ಕೆಲ ಕಡೆ ಅಂಗಡಿಗಳ ಒಳಗಡೆ ನೀರು ನುಗ್ಗಿದೆ.
ಇಂದ್ರಾಣಿ ತೀರ್ಥ ಹರಿಯುವಲ್ಲೆಲ್ಲಾ ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆ ಬಿದ್ದಾಗ ಎಲ್ಲಾ ಕಾಲುವೆಗಳು ತುಂಬಿಕೊಂಡಿರುವುದೇ ಈ ಸಮಸ್ಯೆಗೆ ಕಾರಣ. ಒಳಚರಂಡಿ ಅವ್ಯವಸ್ಥೆಯ ಬಗ್ಗೆ ನೆರೆಪೀಡಿತ ಪ್ರದೇಶದ ಮಹಿಳೆ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭಾರೀ ಮಳೆಯಿಂದ ಇಲ್ಲಿಗೆ ಸಮೀಪದಲ್ಲಿರುವ ತೋಡು ತುಂಬಿ ಹರಿಯುತ್ತಿದ್ದು ಇದರಿಂದ ಈ ಪರಿಸರದ ಹತ್ತಾರು ಮನೆಗಳು ಜಲಾವೃತಗೊಂಡಿದೆ. ಮನೆ ಎದುರಿನ ಅಂಗಳದಲ್ಲಿ ನಿಲ್ಲಿಸಲಾದ ಬೈಕ್, ಕಾರುಗಳು ಕೂಡ ನೀರು ಪಾಲಾಗುತ್ತಿದೆ. ಈ ಮನೆಗಳ ಮಕ್ಕಳು ಶಾಲೆಗೆ ತೆರಳಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಕೂಡ ಜಲಾವೃತಗೊಂಡಿರುವುದರಿಂದ ವಾಹನ ಸಂಚಾರಕ್ಕೂ ಅಡ್ಡಿಯಾಗುತ್ತಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಕರಂಬಳ್ಳಿ ವೆಂಕಟರಮಣ ಲೇಔಟ್ ನ ಹಲವು ಮನೆಗಳು ಜಲಾವೃತಗೊಂಡಿರುವ ಬಗ್ಗೆ ವರದಿಯಾಗಿದೆ.
ಭಾರೀ ಮಳೆಯಿಂದ ಇಲ್ಲಿಗೆ ಸಮೀಪದಲ್ಲಿರುವ ತೋಡು ತುಂಬಿ ಹರಿಯುತ್ತಿದ್ದು ಇದರಿಂದ ಈ ಪರಿಸರದ ಹತ್ತಾರು ಮನೆಗಳು ಜಲಾವೃತಗೊಂಡಿದೆ. ಮನೆ ಎದುರಿನ ಅಂಗಳದಲ್ಲಿ ನಿಲ್ಲಿಸಲಾದ ಬೈಕ್, ಕಾರುಗಳು ಕೂಡ ನೀರು ಪಾಲಾಗುತ್ತಿದೆ. ಈ ಮನೆಗಳ ಮಕ್ಕಳು ಶಾಲೆಗೆ ತೆರಳಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಕೂಡ ಜಲಾವೃತಗೊಂಡಿರುವುದರಿಂದ ವಾಹನ ಸಂಚಾರಕ್ಕೂ ಅಡ್ಡಿಯಾಗುತ್ತಿದೆ.
ಕರಾವಳಿಯಲ್ಲಿ ಶಾಲೆಗಳಿಗೆ ರಜೆ
ಕರಾವಳಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಈಗಾಗಲೇ ಉತ್ತರ ಕನ್ನಡ ಹಾಗೂ ಮಂಗಳೂರು ತಾಲೂಕಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಉಡುಪಿ ಜಿಲ್ಲೆಯಲ್ಲಿ ಕೂಡ ಸೋಮವಾರ ಮುಂಜಾನೆಯಿಂದ ಭಾರೀ ಗಾಳಿ ಮಳೆ ಸುರಿಯುತ್ತಿದ್ದು, ಕೆಲವೊಂದು ಶಾಲೆಯ ಆಡಳಿತ ಮಂಡಳಿ ರಜೆ ಘೋಷಿಸಿದೆ.
ಬೈಂದೂರು ತಾಲೂಕಿನ 19 ಶಾಲೆಗಳಿಗೆ ರಜೆ ಘೋಷಣೆ
ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಬಂದುಹೋಗಲು ಕಷ್ಟವಾಗುವ ಕಡೆಗಳಲ್ಲಿ ರಜೆ ಘೋಷಣೆಗೂ ಸೂಚನೆ ನೀಡಿದ್ದೇವೆ. ಆಯಾ ಶಾಲಾ ಮಟ್ಟದಲ್ಲಿ ನಿರ್ಧಾರ ತೆಗೆದುಕೊಂಡು ಪಾಲಕ – ಪೋಷಕರಿಗೆ ಸೂಚನೆ ನೀಡುವುದು ಮತ್ತು ಮಕ್ಕಳ ಸುರಕ್ಷತೆಗೆ ಹಚ್ಚಿನ ಆದ್ಯತೆ ನೀಡಲು ನಿರ್ದೇಶನ ಕೊಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಡಿಡಿಪಿಐ ಕೆ.ಗಣಪತಿ ತಿಳಿಸಿದ್ದಾರೆ.ಹಾಜರಾಗುವುದು ಕಡ್ಡಾಯವಲ್ಲ ಎಂದು ಪೋಷಕರಿಗೆ ತಿಳಿಸುವುದು. ಎಲ್ಲ ಅನುದಾನಿತ, ಸರಕಾರಿ ಹಾಗೂ ಅನುದಾನರಹಿತ ಶಾಲೆಗಳಿಗೆ ಅನ್ವಯಿಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.