Saturday, January 18, 2025
Google search engine
Homeಇ-ಪತ್ರಿಕೆರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ್‍  ಹೇಳಿದ್ದೇನು?

ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ್‍  ಹೇಳಿದ್ದೇನು?

ಚಿತ್ರದುರ್ಗ: ರೇಣುಕಾಸ್ವಾಮಿ ಪ್ರಕರಣದಲ್ಲಿ ಪೊಲೀಸರು ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಲೋಪ ಆಗದಂತೆ ತನಿಖೆ ನಡೆಸಿ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.

ನಗರದ ವಿಆರ್‍ಎಸ್ ಬಡಾವಣೆಯ ರೇಣುಕಾಸ್ವಾಮಿ ನಿವಾಸಕ್ಕೆ ಮಂಗಳವಾರ ಭೇಟಿ ಮಾಡಿ ತಂದೆ,ತಾಯಿ ಹಾಗೂ ಅವರ ಪತ್ನಿಗೆ ನಿಮ್ಮ ಕುಟುಂಬದ ಜತೆ ಸರ್ಕಾರವಿದೆ ಧೈರ್ಯವಾಗಿರಬೇಕು ಎಂದು ಸಾಂತ್ವನ ಹೇಳಿದರು.

 ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, `ರೇಣುಕಸ್ವಾಮಿ ಕೊಲೆ ಪ್ರಕರಣ ಎಲ್ಲರಿಗೂ ನೋವು ತಂದಿದೆ. ಸರ್ಕಾರ ಮುಲಾಜಿಲ್ಲದೆ, ಯಾವುದೇ ಒತ್ತಡಕ್ಕೆ ಒಳಗಾಗದೆ ತನಿಖೆ ನಡೆಸುತ್ತಿದೆ. ಈಗಾಗಲೇ 17 ಜನರನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ’ ಎಂದರು.

`ರೇಣುಕಾಸ್ವಾಮಿ ವಿವಾಹವಾಗಿ ಒಂದು ವರ್ಷ ಆಗಿದೆ ಎಂಬ ವಿಚಾರ ತಿಳಿಯಿತು. ಕುಟುಂಬಕ್ಕೆ ನ್ಯಾಯ, ಜೀವನ ನಿರ್ವಹಣೆಗೆ ಸೊಸೆಗೆ ಸರ್ಕಾರಿ ಉದ್ಯೋಗ ಕಲ್ಪಿಸಿ ಎಂದು ಮನವಿ ಮಾಡಿದ್ದಾರೆ. ಇವರ ಮನವಿಯನ್ನು ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ಶೀಘ್ರ ಕ್ರಮವಹಿಸಲಾಗುತ್ತದೆ’ ಎಂದು ತಿಳಿಸಿ ಘಟನೆ ನಡೆಯಬಾರದಿತ್ತು. ಆದರೆ ನಡೆದಿದೆ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಎಲ್ಲವನ್ನೂ ರಾಜಕೀಯ ದೃಷ್ಟಿಕೋನದಿಂದ ನೋಡಬಾರದು. ಕಾನೂನಿನಂತೆ ತಪಿಸ್ಥರಿಗೆ ಶಿಕ್ಷೆಯಾಗಲಿದೆ’ ಎಂದರು.

ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಒದಗಿಸಲು ಸರ್ಕಾರ ಬದ್ದವಾಗಿದ್ದು, ಜೀವನ ನಿರ್ವಹಣೆಗಾಗಿ ರೇಣುಕಾಸ್ವಾಮಿ ಹೆಂಡತಿಗೆ ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ `ಪ್ರಕರಣದ ಸಿಬಿಐ ತನಿಖೆ ಅಗತ್ಯ ಇಲ್ಲ. ಯಾವ ಸಚಿವರೂ ಇದರಲ್ಲಿ ಒತ್ತಡ ತಂದಿಲ್ಲ. ಒತ್ತಡಕ್ಕೆ ಮಣಿಯುವ ಪ್ರಶ್ನೆಯಿಲ್ಲ’ ಎಂದರು.

ಪೊಲೀಸರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮೃತ ರೇಣುಕಾಸ್ವಾಮಿ ತಂದೆ ಕಾಶೀನಾಥ್ ಶಿವನಗೌಡ. ನಾವು ಯಾವತ್ತಿಗೂ ಒಂದು ಸಿನಿಮಾ ನೋಡಿಲ್ಲ, ಇದು ಯಾವ ರೀತಿ ಆಗಿದೆಯೋ ಒಂದು ತಿಳಿಯುತ್ತಿಲ್ಲ. ಬಹಳ ಕ್ರೂರವಾಗಿ ಮಗನನ್ನು ಕೊಲೆ ಮಾಡಿದ್ದಾರೆ. ನಮಗೆ ನ್ಯಾಯ  ಕೊಡಿಸಿ ಸ್ವಾಮಿ. ಮಗನನ್ನು ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆ ಕೊಡಿಸಿ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಮನವಿ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಮಾಜಿ ಸಚಿವ ಎಚ್.ಆಂಜನೇಯ, ಶಾಸಕರಾದ ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ ಪಪ್ಪಿ, ಮಾಜಿ ಸಂಸದ ಬಿಎನ್.ಚಂದ್ರಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತಾಜ್‍ಪೀರ್, ಮುಖಂಡರಾದ ಮುರುಳೀಧರ ಹಾಲಪ್ಪ, ಯೋಗೀಶ್ ಬಾಬು, ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ಓ.ಶಂಕರ್ ಸಂಪತ್ ಕುಮಾರ್, ರವಿಕುಮಾರ್, ಶಿವಣ್ಣ, ಮರುಳಾರಾದ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments