Tuesday, January 14, 2025
Google search engine
Homeಇ-ಪತ್ರಿಕೆಶೀರ್ಘದಲ್ಲೇ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ: ಸಿದ್ದರಾಮಯ್ಯ

ಶೀರ್ಘದಲ್ಲೇ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ: ಸಿದ್ದರಾಮಯ್ಯ

ಮೈಸೂರು: ಶೀರ್ಘದಲ್ಲೇ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಯನ್ನು ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು. ರಾಜ್ಯ ಸರಕಾರವು ದೇವೇಗೌಡ ಮತ್ತು ಯಡಿಯೂರಪ್ಪ ಅವರ ಕುಟುಂಬಗಳನ್ನು ಗುರಿಮಾಡಲಾಗುತ್ತಿದೆ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ ಎಂದು ತಿಳಿಸಿದರು.

ಡಿ ಕೆ ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲಿನ ದೂರುಗಳಿಗೆ ಇವರ ಉತ್ತರವೇನು?  ಅರವಿಂದ ಕೇಜ್ರಿವಾಲ್ ಪ್ರಕರಣ ಏನನ್ನು ಸೂಚಿಸುತ್ತದೆ ಎಂದು ಪ್ರಶ್ನಿಸಿದರು.

ನೀಟ್ ಪರೀಕ್ಷೆಯಲ್ಲಿ ಕೆಲವು ರ್ಯಾಂಕ್ ನೀಡುವುದರಲ್ಲಿ ಹಾಗೂ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರುಪರೀಕ್ಷೆಯಾಗಬೇಕು ಎಂದು ಅವರು ತಿಳಿಸಿದರು.

ಬರಪರಿಹಾರದ ಬಾಕಿ ಮೊತ್ತವನ್ನು ರೈತರಿಗೆ ವಿತರಿಸಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

RELATED ARTICLES
- Advertisment -
Google search engine

Most Popular

Recent Comments